ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದು, ನಾಮಫಲಕಕ್ಕೆ ಹಾನಿಯಾಗಿದೆ. ರುದ್ರಭೂಮಿ ಬಳಿ ಲೇಔಟ್ ನಿರ್ಮಾಣದ ವೇಳೆ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದ್ದು,
ದರ್ಶನ್ ಅಂಡ್ ಗ್ಯಾಂಗ್ ಹತ್ಯೆ ಪ್ರಕರಣದ ಬೆನ್ನಲ್ಲೇ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ರೇಣುಕಾಸ್ವಾಮಿ ಹತ್ಯೆ ಕೇಸ್ ವಿಚಾರವಾಗಿ ಪ್ರಮುಖ ಆರೋಪಿಗಳಾದ ನಟ ದರ್ಶನ್,
ಪವಿತ್ರಾ ಸೇರಿ ಗ್ಯಾಂಗ್ ಜೈಲು ಸೇರಿದ್ದಾರೆ. ನಟ ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಕಾರಣ 2024ರ ಜೂನ್ ತಿಂಗಳಿನಲ್ಲಿ ರೇಣುಕಾಸ್ವಾಮಿ ಹತ್ಯೆ ನಡೆದಿತ್ತು.



