ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ತಮಿಳುನಾಡಿನ ಮಧುರೈನಲ್ಲಿ ಅರೆಸ್ಟ್ ಮಾಡಲಾಗಿದೆ.
ಎ2 ನಿತಿನ್, ಎ4 ದರ್ಶನ್, ಎ5 ಅಜಯ್ ಸೇರಿದಂತೆ ದರ್ಶನ್ ನಾಯ್ಕ್, ಯೋಗೇಶ್, ಫೈಸಲ್ ಬಂಧಿತ ಆರೋಪಿಗಳಾಗಿದ್ದು, ಸಖರಾಯಪಟ್ಟಣದಲ್ಲಿ ಡಿಸೆಂಬರ್ 5ರ ರಾತ್ರಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯೊಂದಿಗೆ ಅಂತ್ಯವಾಗಿತ್ತು.
ಆರೋಪಿಗಳ ಬಂಧನಕ್ಕೆ ನಾಲ್ಕು ವಿಶೇಷ ತಂಡ ರಚನೆ ಮಾಡಲಾಗಿತ್ತು. ಗಣೇಶ್ ಕೊಲೆ ಪ್ರಕರಣದಲ್ಲಿ ಇಲ್ಲಿಯವರೆಗೂ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿರುವ ಎ1 ಸಂಜಯ್ ಎ3 ನಾಗಭೂಷಣ್, ಎ6 ಮಿಥುನ್ ಸೇರಿದಂತೆ 6 ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.



