ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 13ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದು, ಅಂದು ಬೆಳಿಗ್ಗೆ 10.20 ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 11.15 ಗಂಟೆಗೆ ಜಿಲ್ಲೆಯ ಲಕ್ಷ್ಮೇಶ್ವರದ ಶ್ರೀ ಉಮಾ ಪಿ.ಯು. ಕಾಲೇಜು ಮೈದಾನದ ಹೆಲಿಪ್ಯಾಡ್‌ಗೆ ಆಗಮಿಸುವರು.
ಲಕ್ಷ್ಮೇಶ್ವರದ ಚಂದನ ಎಜ್ಯುಕೇಶನ್ ಸೊಸೈಟಿ ವತಿಯಿಂದ ಆಯೋಜಿಸಿರುವ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ 10ನೇ ವರ್ಷದ ವಿಜ್ಞಾನ ವಿಸ್ತೃತ ಕಾರ್ಯಕ್ರಮ-2025 ಹಾಗೂ ಬಿ.ಎಸ್. ಪಾಟೀಲ, ಭಾ.ಆ.ಸೇ (ನಿ) ಇವರಿಗೆ 2025ನೇ ಸಾಲಿನ ಪ್ರತಿಷ್ಠಿತ `ಚಂದನಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳುವರು. ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಜರುಗಿಸುವರು. ಮಧ್ಯಾಹ್ನ 3 ಗಂಟೆಗೆ ಲಕ್ಷ್ಮೇಶ್ವರದ ಶ್ರೀ ಉಮಾ ಪಿ.ಯು. ಕಾಲೇಜು ಮೈದಾನ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.



