ವಿಜಯಸಾಕ್ಷಿ ಸುದ್ದಿ, ಗದಗ: ಡಿ. 13ರಂದು ನಡೆಯಲಿರುವ ನವೋದಯ ಪರೀಕ್ಷೆಯ ಪ್ರತಿಯೊಂದು ಕೊಠಡಿಯಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ, ಪರೀಕ್ಷೆ ನಡೆಯುವ ಸ್ಥಳದಲ್ಲಿ ಆಯೋಜಿಸಿರುವ ಶಿಕ್ಷಕರು ಕಡ್ಡಾಯವಾಗಿ ನಿಯಮವನ್ನು ಪಾಲಿಸಬೇಕು ಮತ್ತು ನ್ಯಾಯಯುತವಾಗಿ ಪರೀಕ್ಷೆಯನ್ನು ನಡೆಸಬೇಕು. ಒಂದು ವೇಳೆ ಪರೀಕ್ಷೆ ನಡೆಯುವ ಕೊಠಡಿಯಲ್ಲಿ ಯಾವುದೇ ರೀತಿಯ ಅಸಭ್ಯ ವರ್ತನೆ ಕಂಡುಬಂದುರೆ ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳೇ ಹೊಣೆಯಾಗಿರುತ್ತಾರೆ.
ಅಂಥಹ ಘಟನೆಗಳು ಜರಗದಂತೆ ಮುನ್ನೆಚ್ಚರಿಕೆ ವಹಿಸಿ ಪರೀಕ್ಷೆಯ ಕೊಠಡಿಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳು ಕಾನೂನು ಅಡಿಯಲ್ಲಿ ಪರೀಕ್ಷೆಯನ್ನು ನಡೆಸಬೇಕೆಂದು ಜಯ ಕರ್ನಾಟಕ ಜನಪರ ವೇದಿಕೆಯ ರಾಜ್ಯ ಉಪಾಧ್ಯಕ್ಷ ಹಾಲಪ್ಪ ಈ.ವರವಿ ಅವರು ಪತ್ರಿಕಾ ಪ್ರಕಟಣೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.



