ಬೆಂಗಳೂರು:- ರಾಜಧಾನಿ ಬೆಂಗಳೂರಿನ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಒಡೆತನದ ‘ಬ್ಯಾಸ್ಟಿಯನ್’ ಪಬ್‌ನಲ್ಲಿ ಗುರುವಾರ ರಾತ್ರಿ ಕಿರಿಕ್ ನಡೆದಿದೆ.
ಮಾಜಿ ಬಿಗ್ ಬಾಸ್ ಸ್ಪರ್ಧಿ, ನಿರೂಪಕಿಯ ಮಾಜಿ ಪತಿ ಹಾಗೂ ಉದ್ಯಮಿ ಸತ್ಯ ನಾಯ್ಡು ಅವರು ಪಬ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸರ್ವಿಸ್ ವಿಚಾರವಾಗಿ ಆರಂಭವಾದ ವಾಗ್ವಾದವು ನಂತರ ಹಲ್ಲೆಗೆ ತಿರುಗಿದ್ದು, ಘಟನೆಯ ಸಮಯದಲ್ಲಿ ಸತ್ಯ ನಾಯ್ಡು ಅತಿಯಾಗಿ ಮದ್ಯಪಾನ ಮಾಡಿದ್ದರು ಎನ್ನಲಾಗಿದೆ. ಗಲಾಟೆಯ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದ್ದು, ಇದನ್ನು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆ ಸಂಬಂಧ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಪಬ್‌ಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದು, ವೈರಲ್ ವಿಡಿಯೋ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.



