ಚಿಕ್ಕಬಳ್ಳಾಪುರ:- ಕಳೆದ ಸಾಕಷ್ಟು ದಿನಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯನ್ನ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾರೋನಹಳ್ಳಿ ಗ್ರಾಮದಲ್ಲಿ ಚಿರತೆಯ ಉಪಟಳ ಹೆಚ್ಚಾಗಿತ್ತು. ಮೇಕೆ, ನಾಯಿಗಳ ಮೇಲೆ ದಾಳಿ ನಡೆಸಿ ಬಲಿ ಪಡೆದಿತ್ತು. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದರು.
ಈ ಕುರಿತು ಗ್ರಾಮದ ಮುಖಂಡರು, ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆಗೆ ಮನವಿ ಮಾಡಿದರು. ಕೂಡಲೇ ಅರಣ್ಯ ಅಧಿಕಾರಿಗಳು ಶನಿವಾರ ಸಂಜೆಯ ವೇಳೆಗೆ ಬೋನ್ ಅಳವಡಿಸಿದ್ದರು. ಬೋನು ಇರಿಸಿದ ಒಂದೇ ದಿನಕ್ಕೆ ಚಿರತೆ ಬೋನಿಗೆ ಬಿದ್ದಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರುಬಿಟ್ಟಿದ್ದಾರೆ.



