ಬಾಕ್ಸಾಫೀಸ್‌ನಲ್ಲಿ ಭರ್ಜರಿ ದಾಖಲೆ ಬರೆದ ಜೈಲರ್ ಸಿನಿಮಾದ ಮುಂದುವರಿದ ಭಾಗ ಜೈಲರ್–2 ಬಗ್ಗೆ ಹೊಸ ಅಪ್‌ಡೇಟ್‌ಗಳು ಹೊರಬಿದ್ದಿವೆ. ರಜನಿಕಾಂತ್ ಮತ್ತು ನೆಲ್ಸನ್ ದಿಲೀಪ್ ಕುಮಾರ್ ಕಾಂಬಿನೇಷನ್ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.
ಪಾರ್ಟ್–2 ಚಿತ್ರವನ್ನು ಯಾವುದೇ ಅಧಿಕೃತ ಘೋಷಣೆಗಳಿಲ್ಲದೇ ಶೂಟಿಂಗ್ ಮುಗಿಸುವತ್ತ ತಂಡ ಗಮನ ಹರಿಸಿರುವುದು ಸಿನಿರಂಗದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಾರಿ ಕೂಡಾ ದಕ್ಷಿಣ ಭಾರತದ ಹಲವು ಸ್ಟಾರ್ ಕಲಾವಿದರು ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್‌ಕುಮಾರ್ ಜೈಲರ್–2 ಚಿತ್ರದಲ್ಲೂ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದು, ಹೊಸ ಆಯಾಮದ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಇದರೊಂದಿಗೆ ಬಾಲಿವುಡ್ ನಟಿ ವಿದ್ಯಾ ಬಾಲನ್ ಚಿತ್ರಕ್ಕೆ ಸೇರ್ಪಡೆಯಾಗಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.
ವಿದ್ಯಾ ಬಾಲನ್ ಅವರನ್ನು ವಿಶೇಷ ಪಾತ್ರಕ್ಕಾಗಿ ಆಯ್ಕೆ ಮಾಡಲಾಗಿದ್ದು, ಕಥೆಯಲ್ಲಿ ಮಹತ್ವದ ತಿರುವು ನೀಡುವ ಪಾತ್ರವದು ಎಂದು ಹೇಳಲಾಗುತ್ತಿದೆ. ಲಭ್ಯವಿರುವ ಮಾಹಿತಿಯಂತೆ, ಜೈಲರ್–2 ಚಿತ್ರವನ್ನು ಆಗಸ್ಟ್ 14ರಂದು ವಿಶ್ವದಾದ್ಯಂತ ಬಿಡುಗಡೆ ಮಾಡುವ ಯೋಜನೆ ಇದೆ.



