ಬೆಂಗಳೂರು:- ನಗರದಲ್ಲಿ ಚಳಿ ತೀವ್ರಗೊಳ್ಳುತ್ತಿದ್ದು, ಕೆಸಿ ಜನರಲ್ ಆಸ್ಪತ್ರೆಯಲ್ಲಿ ಶೀತ, ಕೆಮ್ಮು, ನೆಗಡಿ ತಪಾಸಣೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗಿದೆ.
ಕಳೆದ ಎರಡು-ಮೂರು ವಾರಗಳಿಂದ ಕನಿಷ್ಟ ತಾಪಮಾನ ದಾಖಲಾಗಿದ್ದು, 14 ಡಿಗ್ರಿ ಸೆಲ್ಸಿಯಸ್ ತಾಪಮಾನಕ್ಕೆ ಜನರ ವಾಸ್ತವಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರುತ್ತಿದೆ.
ಮಕ್ಕಳು ಮತ್ತು ವಯಸ್ಕರು ಹೆಚ್ಚಿನ ಪ್ರಮಾಣದಲ್ಲಿ ಆಸ್ಪತ್ರೆಗೆ ಬರುತ್ತಿದ್ದು, ಕೆಲವರು ತಪಾಸಣೆ ನಂತರ ಮನೆಗೆ ವಾಪಸ್ ಹೋಗುತ್ತಿದ್ದಾರೆ. ಕೆಲವರು ಆಸ್ಪತ್ರೆಯಲ್ಲಿ ದಾಖಲಾಗುತ್ತಿದ್ದಾರೆ. ಮಕ್ಕಳ ವಿಭಾಗವೂ ಚಳಿಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ತುಂಬಿದೆ.
ಈ ತಿಂಗಳಾಂತ್ಯದಲ್ಲಿ ತಾಪಮಾನ ಮತ್ತಷ್ಟು ಕುಸಿಯುವ ನಿರೀಕ್ಷೆ ಇದೆ. ಪೋಷಕರು ಮತ್ತು ನಾಗರಿಕರು ಬೆಚ್ಚನೆಯ ಉಡುಪು ಧರಿಸಿ, ಆರೋಗ್ಯ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸಲು ವೈದ್ಯರು ಶಿಫಾರಸು ಮಾಡಿದ್ದಾರೆ.



