ಧಾರವಾಡ:- ಧಾರವಾಡ ನಗರದ ಶಿವಗಿರಿಯಲ್ಲಿ ಕಳೆದ 4 ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಉದ್ಯೋಗಾಕಾಂಕ್ಷಿ ಯುವತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ಪಲ್ಲವಿ ಕಗ್ಗಲ್ (25) ಆತ್ಮಹತ್ಯೆ ಮಾಡಿಕೊಂಡ ಯುವತಿ. ಇವರು ಬಳ್ಳಾರಿ ಮೂಲದವರು. ನೇಮಕಾತಿಗಳು ನಡೆಯುತ್ತಿಲ್ಲ ಅಂತ ಮನನೊಂದು ಶಿವಗಿರಿಯ ರೈಲ್ವೆ ಟ್ರ್ಯಾಕ್‌ಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಮೃತ ಪಲ್ಲವಿ ಕಗ್ಗಲ್ ಕಳೆದ 4 ವರ್ಷಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದರು ಎನ್ನಲಾಗಿದೆ.
ಸ್ಥಳಕ್ಕೆ ರೇಲ್ವೆ ಪೋಲಿಸರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.



