ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಅವರನ್ನು ಈಗಾಗಲೇ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. 1 ಲಕ್ಷ ರೂ. ಬಾಂಡ್ ಸಲ್ಲಿಸಿದ ಬಳಿಕ ಅವರು ಜೈಲಿನಿಂದ ಹೊರಬಂದಿದ್ದಾರೆ.
ಇದರ ಬೆನ್ನಲ್ಲೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿರನ್ನು ಗಡಿಪಾರು ಮಾಡುವಂತೆ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ.
ಇದಕ್ಕೂ ಮೊದಲು ತಿಮರೋಡಿಗೆ ಗಡಿಪಾರು ನೋಟಿಸ್ ನೀಡಿದ್ದ ಸ್ಟೆಲ್ಲಾ ವರ್ಗೀಸ್, ಇದೀಗ ಮತ್ತೊಮ್ಮೆ ಆದೇಶ ಹೊರಡಿಸಿದ್ದಾರೆ. “ಯಾಕೆ ಗಡಿಪಾರು ಮಾಡಬಾರದು” ಎಂಬ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
ಡಿ.7ರಂದು ಸಹಾಯಕ ಆಯುಕ್ತರ ಗಡಿಪಾರು ನೋಟಿಸ್ಗೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಆಕ್ಷೇಪಣೆ ಸಲ್ಲಿಸಿದ್ದರು. ಈ ಆಕ್ಷೇಪಣೆಗೆ ಉತ್ತರದ ರೂಪದಲ್ಲಿ ಇದೀಗ ಸಹಾಯಕ ಆಯುಕ್ತರು ಮತ್ತೊಂದು ನೋಟಿಸ್ ಜಾರಿ ಮಾಡಿದ್ದಾರೆ. ಪುತ್ತೂರು ಸಹಾಯಕ ಆಯುಕ್ತರ ಎದುರು ಮಹೇಶ್ ಶೆಟ್ಟಿ ತಿಮರೋಡಿ ಅವರು ವಕೀಲರ ಮೂಲಕ ಆಕ್ಷೇಪಣೆ ಸಲ್ಲಿಸಿದ್ದರು.
ಈ ಸಂದರ್ಭದಲ್ಲಿ ತಿಮರೋಡಿ ಪರ ವಕೀಲರು ಮತ್ತು ಸಹಾಯಕ ಆಯುಕ್ತರ ನಡುವೆ ವಾದ-ವಿವಾದ ನಡೆಯಿತು. ಇದರ ನಂತರ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮತ್ತೆ ಗಡಿಪಾರು ಆದೇಶ ಹೊರಡಿಸಿದ್ದಾರೆ.



