ಆನೇಕಲ್:- ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಸಮೀಪದ ವಣಕನಹಳ್ಳಿ ಸಮೀಪ ಡಿವೈಡರ್ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜರುಗಿದೆ.
ಪಶ್ಚಿಮ ಬಂಗಾಳ ಮೂಲದ ಆಕಾಶ್(23) ದುರ್ಮರಣ. ಆಕಾಶ್ ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಸದ್ಯ ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತ ಶವವನ್ನು ಆನೇಕಲ್ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



