ವಿಜಯಸಾಕ್ಷಿ ಸುದ್ದಿ, ಗದಗ: ಬಿಹಾರ ಸರ್ಕಾರದಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ವೈದ್ಯೆಯ ಮಹಿಳೆಯ ಹಿಜಾಬ್ ಎಳೆದು ಅವಮಾನ ಮಾಡಿರುವ ಘಟನೆಯನ್ನು ಖಂಡಿಸಿ, ಕೂಡಲೇ ಇಂತಹ ಮಹಿಳಾ ವಿರೋಧಿ ಮುಖ್ಯಮಂತ್ರಿ Nitish Kumar ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕೆಂದು ಸ್ಲಂ ಜನಾಂದೋಲನ–ಕರ್ನಾಟಕ ಹಾಗೂ ಗದಗ ಜಿಲ್ಲಾ ಸ್ಲಂ ಮಹಿಳಾ ಸಮಿತಿಯಿಂದ ರಾಷ್ಟçಪತಿಗಳಿಗೆ ಮನವಿ ನೀಡಿ ಆಗ್ರಹಿಸಿದರು.
ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ ಮಾತನಾಡಿ, ಬಿಹಾರದ ಪಾಟ್ನಾದಲ್ಲಿ ಸರ್ಕಾರದ ವತಿಯಿಂದ ಆಯುಷ್ ವೈದ್ಯರಿಗೆ ನೇಮಕಾತಿ ಪತ್ರ ವಿತರಿಸುವ ಸಂದರ್ಭದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ಎಳೆಯುವ ಮೂಲಕ ಮಹಿಳಾ ಸಮುದಾಯಕ್ಕೆ ಅವಮಾನ ಮಾಡಿರುವ ಬಿಹಾರದ ಮುಖ್ಯಮಂತ್ರಿ ನಿತೀಶ ಕುಮಾರರನ್ನು ಮಹಿಳಾ ದೌರ್ಜನ್ಯ ತಡೆ ಕಾಯ್ದೆಯಡಿ ಬಂಧಿಸಬೇಕು. ಇಂತಹ ಮುಖ್ಯಮಂತ್ರಿಗಳಿಂದ ಮಹಿಳೆಯರ ರಕ್ಷಣೆ ಹೇಗೆ ಸಾಧ್ಯ? ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸಂವಿಧಾನಬದ್ಧ ಮಹಿಳಾ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಸಮಿತಿ ಮುಖಂಡರಾದ ಮೆಹರುನಿಸಾ ಡಂಬಳ, ಮೈಮುನ ಬೈರಕದಾರ, ಪ್ರೇಮಾ ಮಣ್ಣವಡರ, ಮೀನಾಕ್ಷಿ ಗೋಂದಾರ, ಸಲ್ಮಾ ಬಿ, ವಿಶಾಲಾಕ್ಷಿ ಗೌಡ್ರ → ಗೌಡರ, ಜಿಲ್ಲಾ ಸಮಿತಿ ಅಧ್ಯಕ್ಷರಾದ ಇಮ್ತಿಯಾಜ ಆರ್. ಮಾನ್ವಿ, ಮುಖಂಡರಾದ ಇಬ್ರಾಹಿಂ ಮುಲ್ಲಾ, ಮೆಹಬೂಬಸಾಬ ಬಳ್ಳಾರಿ, ಶರಣಪ್ಪ ಸೂಡಿ, ಸಲೀಂ ಹರಿಹರ, ಮಕ್ತುಮಸಾಬ ಮುಲ್ಲಾನವರ, ಖಾಜಾಸಾಬ ಇಸ್ಮಾಯಿಲನವರ ಮುಂತಾದವರು ಉಪಸ್ಥಿತರಿದ್ದರು.



