ಬೆಂಗಳೂರು:- ಬೆಂಗಳೂರಿನ ತ್ಯಾಗರಾಜನಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಬಾಲಕನಿಗೆ ವ್ಯಕ್ತಿಯೋರ್ವ ಹಿಂಬದಿಯಿಂದ ಜಾಡಿಸಿ ಒದ್ದ ಘಟನೆ ಬೆಳಕಿಗೆ ಬಂದಿದೆ.
ಡಿ.14ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಜ್ಜಿ ಮನೆಗೆ ಬಂದಿದ್ದ ಬಾಲಕ ನೀವ್ ಜೈನ್ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ. ಈ ವೇಳೆ ಬಂದ ರಂಜನ್ ಜಾಡಿಸಿ ಒದ್ದಿದ್ದರಿಂದ ಬಾಲಕ ಮುಗ್ಗರಿಸಿ ಬಿದ್ದಿದ್ದಾನೆ. ಫುಟ್ಬಾಲ್ ರೀತಿ ರಂಜನ್ ಒದ್ದಿದ್ದ ಕಾರಣ ಬಾಲಕನಿಗೆ ತರಚಿದ ಗಾಯಗಳಾಗಿವೆ. ಬಾಲಕನನ್ನು ರಂಜನ್ ಒದೆಯುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಆರೋಪಿ ವಿರುದ್ಧ ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ರಂಜನ್ನನ್ನು ಬನಶಂಕರಿ ಪೊಲೀಸರು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ.



