ಕಾರವಾರ:- ನನ್ನ ಹಾಗೂ ಸಿದ್ದರಾಮಯ್ಯ ಮಧ್ಯೆ ಒಪ್ಪಂದ ನಡೆದಿದೆ, ಅದರಂತೆ ನಡೆದುಕೊಳ್ಳುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
5 ವರ್ಷ ನಾನೇ ಸಿಎಂ, ಹೈಕಮಾಂಡ್ ನನ್ನ ಪರವಾಗಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆಶಿ, ನನ್ನ ಮತ್ತು ಸಿದ್ದರಾಮಯ್ಯ ಮಧ್ಯೆ ಒಪ್ಪಂದ ನಡೆದಿದೆ. ನಾವಿಬ್ಬರೂ ಮಾತನಾಡಿಕೊಂಡಿದ್ದೇವೆ, ಅದರಂತೆ ನಡೆದುಕೊಳ್ಳುತ್ತೇವೆ. ನಾನು ಯಾವತ್ತೂ ಐದು ವರ್ಷ ಇರುವುದಿಲ್ಲ ಎಂದು ಹೇಳಿಲ್ಲ. ಹೈಕಮಾಂಡ್ ನಿರ್ಧಾರ ಆಗಿದೆ. ಹೈಕಮಾಂಡ್ ಸಿಎಂ ಪರವಾಗಿ ಇದ್ದದ್ದಕ್ಕೆ ಅವರು ಸಿಎಂ ಆಗಿದ್ದಾರೆ ಎಂದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ಸಂಬಂಧ ಚರ್ಚೆ ನಡೆಯುತ್ತಿದೆ ಎಂಬ ಪ್ರಶ್ನೆಗೆ, ಅದು ಎಲ್ಲವೂ ನಿಮ್ಮಲ್ಲಿ ಚರ್ಚೆ ಆಗುತ್ತಿದೆ ಎಂದು ಮುಗುಳುನಕ್ಕು ಡಿಸಿಎಂ ತೆರಳಿದರು.



