ಹಾಸನ: ಹಾಸನ ಜಿಲ್ಲೆಯಲ್ಲಿ ಹಠಾತ್ ಹೃದಯಾಘಾತದಿಂದ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ (58) ಸಾವನ್ನಪ್ಪಿದ ಘಟನೆ ನಡೆದಿದೆ.
ಅವರು ಈ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿದ್ದರು ಮತ್ತು ನಿವೃತ್ತಿಯಾಗಲು ಇನ್ನೆರಡು ವರ್ಷ ಮಾತ್ರ ಬಾಕಿ ಇತ್ತು. ಇಂದು ಮುಂಜಾನೆ ತಮ್ಮ ಮನೆಯಲ್ಲೇ ಮಲಗುತ್ತಿದ್ದಾಗ ಹಠಾತ್ ಹೃದಯಾಘಾತದಿಂದ ಮೃತರಾಗಿದ್ದಾರೆ.
ಇದೇ ಸಮಯದಲ್ಲಿ ಹೊಳೆನರಸೀಪುರದ ಹಳ್ಳಿಮೈಸೂರು ಹೋಬಳಿ ಗುಲಗಂಜಿಹಳ್ಳಿ ಗ್ರಾಮದಲ್ಲಿ ಪರಮೇಶ್ (35) ಎಂಬ ಯುವಕ ಹಠಾತ್ ಹೃದಯಾಘಾತದಿಂದ ನಿಧನರಾದರು.
ಅವರು ಪಟ್ಟಣದ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದವರು. ಮಧ್ಯರಾತ್ರಿ 2 ಗಂಟೆ ವೇಳೆಗೆ ಮಲಗಿದ್ದಾಗ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯಲ್ಲಿ ಹಠಾತ್ ಹೃದಯಾಘಾತ ಪ್ರಕರಣಗಳು ಮರುಕಳುತ್ತಿರುವುದು, ಸ್ಥಳೀಯ ಜನರಲ್ಲಿ ಆತಂಕವನ್ನು ಉಂಟು ಮಾಡಿದೆ.



