ಗದಗ:- ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಿರಾಣಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ವಸ್ತುಗಳು ಅಗ್ನಿಗಾಹುತಿ ಆಗಿರುವ ಘಟನೆ ಗದಗನ ಬೆಟಗೇರಿಯ ಟೆಂಗಿನಕಾಯಿ ಬಜಾರ್‌ನಲ್ಲಿ ಜರುಗಿದೆ.
ತಿಪ್ಪಣಸಾ ಅರವಟಗಿ ಅವರಿಗೆ ಸೇರಿದ ಕಿರಾಣಿ ಅಂಗಡಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟರು.
ಬೆಟಗೇರಿ ಪೊಲೀಸರ ನೇತೃತ್ವದಲ್ಲಿ ಬೆಂಕಿ ನಂದಿಸುವ ಕಾರ್ಯ ನಡೆಯಿತು. ಈ ಘಟನೆ ಬೆಟಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.



