ಚಿಕ್ಕಬಳ್ಳಾಪುರ:- ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಚಿಕ್ಕಬಳ್ಳಾಪುರದ ಬೈಪಾಸ್ನಲ್ಲಿ ಜರುಗಿದೆ.
ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಮತ್ತು ಇಬ್ಬರು ಮಕ್ಕಳಿಗೆ ಗಾಯವಾಗಿದೆ. ಸ್ಕೂಟಿ ಸವಾರ ಮುನಿಕೃಷ್ಣನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಪತ್ನಿ ಮುನಿರತ್ನಮ್ಮ ಪ್ರಜ್ಞೆ ತಪ್ಪಿದ್ದು, ಮಕ್ಕಳಿಗೂ ಗಾಯಗಳಾಗಿವೆ.
ಕಾರಿನಲ್ಲಿದ್ದ ಯುವಕರು ಮದ್ಯ ಸೇವಿಸಿ ಸ್ಕೂಟಿಗೆ ಡಿಕ್ಕಿ ಹೊಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸರ ಭೇಟಿ ನಂತರ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.



