ನವದೆಹಲಿ: ದೆಹಲಿಯಿಂದ ಮುಂಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ, ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನವನ್ನು ಮರುದಾಗಿ ದೆಹಲಿ ವಿಮಾನ ನಿಲ್ದಾಣಕ್ಕೆ ತುರ್ತು ಭೂಸ್ಪರ್ಶ ಮಾಡಲಾಗಿದೆ.
ವಿಮಾನದಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯನ್ನು ಗಮನಿಸಿದ ಪೈಲಟ್‌ಗಳು, ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಪ್ರಕಾರ ಮುನ್ನೆಚ್ಚರಿಕೆಯ ಕ್ರಮವಾಗಿ ವಿಮಾನಯಾನವನ್ನು ಮುಂದುವರಿಸದೆ ಹಿಂತಿರುಗುವ ನಿರ್ಧಾರ ಕೈಗೊಂಡರು. ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದ್ದು, ಎಲ್ಲ ಪ್ರಯಾಣಿಕರು ಹಾಗೂ ಸಿಬ್ಬಂದಿ ಸಂಪೂರ್ಣವಾಗಿ ಸುರಕ್ಷಿತರಾಗಿದ್ದಾರೆ ಎಂದು ಏರ್ ಇಂಡಿಯಾ ತಿಳಿಸಿದೆ.
ಡಿ.22ರಂದು ದೆಹಲಿಯಿಂದ ಮುಂಬೈಗೆ ಹಾರಾಟ ನಡೆಸಬೇಕಿದ್ದ AI887 ವಿಮಾನದಲ್ಲಿ ಈ ಘಟನೆ ಸಂಭವಿಸಿದ್ದು, ಪ್ರಯಾಣಿಕರ ಮತ್ತು ಸಿಬ್ಬಂದಿಯ ಸುರಕ್ಷತೆಯೇ ಮೊದಲ ಆದ್ಯತೆ ಎಂಬ ಕಾರಣಕ್ಕೆ ವಿಮಾನವನ್ನು ಸುರಕ್ಷತಾ ಮಾನದಂಡಗಳಿಗೆ ಅನುಗುಣವಾಗಿ ಹಿಂತಿರುಗಿಸಲಾಗಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.



