ಬೆಂಗಳೂರು:- ರಾಜಧಾನಿ ಬೆಂಗಳೂರು ಮಂದಿಗೆ ಕಳೆದ ಕೆಲವು ದಿನಗಳಿಂದ ಪವರ್ ಸಮಸ್ಯೆ ಬಿಟ್ಟು ಬಿಡದೇ ಕಾಡುತ್ತಿದೆ. ಕಾಮಗಾರಿ ನೆಪದಲ್ಲಿ ಬೆಸ್ಕಾಂ ಪವರ್ ಕಟ್ ಮಾಡುತ್ತಿದ್ದು, ಈ ಸಮಸ್ಯೆ ಇನ್ನೂ ಸ್ವಲ್ಪ ದಿನ ಮುಂದುವರಿಯಲಿದೆ.
ಇಂದು ಕೆಪಿಟಿಸಿಎಲ್, ಪ್ರಮುಖ ಪ್ರಸರಣ ಮಾರ್ಗಗಳು ಮತ್ತು ಸಬ್‍ಸ್ಟೇಷನ್‍ಗಳಲ್ಲಿ ತುರ್ತು ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ದಕ್ಷಿಣ, ಪಶ್ಚಿಮ ಮತ್ತು ಉತ್ತರದ 80 ಕ್ಕೂ ಹೆಚ್ಚು ನೆರೆಹೊರೆಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ. ಅಲ್ಲದೇ ಡಿಸೆಂಬರ್ 25 ರಿಂದ ನಾಲ್ಕು ದಿನ ಬೆಂಗಳೂರಿನ ಹಲವಾರು ಪ್ರದೇಶಗಳಲ್ಲಿ ಪ್ರತಿದಿನ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಇಂದು ಎಲ್ಲೆಲ್ಲಿ ಪವರ್ ಕಟ್:
ಯಡ್ವನಹಳ್ಳಿ, ಇಚ್ಚಂಗೂರು, ವಡ್ಡರಪಾಳ್ಯ, ಅತ್ತಿಬೆಲೆ ಕೈಗಾರಿಕಾ ಪ್ರದೇಶ, ಬಳಗಾರನಹಳ್ಳಿ, ಮಂಚನಹಳ್ಳಿ, ಅತ್ತಿಬೆಲೆ ಟೌನ್, ಮಾಯಸಂದ್ರ, ದಾಸನಾಪುರ, ಬಲ್ಲೂರು, ಕಬಳಿಪುರ, ಚಿಕ್ಕನಹಳ್ಳಿ, ಇಂಡಿಬೆಲೆ, ಹಾರೋಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಆನೇಕಲ್ ಟೌನ್, ಕಾವಲುಹೊಸಹಳ್ಳಿ, ಗೌರೇನಹಳ್ಳಿ, ಹಲ್ದೇನಹಳ್ಳಿ, ಹೊಂಪಲಗಟ್ಟಾ, ಚೂಡೇನಹಳ್ಳಿ, ಹೊನ್ನಕಲಶಾಪುರ, ಕರ್ಪೂರು, ಬ್ಯಾಗಡದೇನಹಳ್ಳಿ, ಕಾಡ ಅಗ್ರಹಾರ, ಚಿಕ್ಕಹಾಗಡೆ, ದೊಡ್ಡಹಾಗಡೆ, ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.



