ವಿಶಾಖಪಟ್ಟಣಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಶ್ರೀಲಂಕಾ ಮಹಿಳಾ ತಂಡವನ್ನು ಏಕಪಕ್ಷೀಯವಾಗಿ ಮಣಿಸಿದ್ದ ಭಾರತ ವನಿತಾ ಪಡೆ (India Women vs Sri Lanka Women), ಇದೀಗ ಎರಡನೇ ಟಿ20 ಪಂದ್ಯವನ್ನಾಡಲು ಸಜ್ಜಾಗಿದೆ. ಉಭಯ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಇಂದು ನಡೆಯಲಿದೆ.
ಮೊದಲ ಪಂದ್ಯದಲ್ಲಿ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಶ್ರೀಲಂಕಾ ತಂಡ ಕೇವಲ 126 ರನ್‌ಗಳಿಗೆ ಸೀಮಿತಗೊಂಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತ ತಂಡದ ಪರ ಜೆಮಿಮಾ ರೋಡ್ರಿಗ್ಸ್ 44 ಎಸೆತಗಳಲ್ಲಿ 69 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದು, ತಂಡವನ್ನು ಸುಲಭ ಜಯದತ್ತ ಕರೆದೊಯ್ದಿದ್ದರು.
ಇದೀಗ ಎರಡನೇ ಪಂದ್ಯದಲ್ಲೂ ಟೀಮ್ ಇಂಡಿಯಾ ಇದೇ ರೀತಿಯ ಪ್ರದರ್ಶನ ನೀಡುವ ಉದ್ದೇಶ ಹೊಂದಿದ್ದು, ಇತ್ತ ಶ್ರೀಲಂಕಾ ಮಹಿಳಾ ಕ್ರಿಕೆಟ್ ತಂಡವು ಬಲವಾದ ಪುನರಾಗಮನದ ನಿರೀಕ್ಷೆಯಲ್ಲಿದೆ.
ಭಾರತ ಮತ್ತು ಶ್ರೀಲಂಕಾ ಮಹಿಳಾ ತಂಡಗಳ ನಡುವಿನ ಎರಡನೇ ಟಿ20 ಪಂದ್ಯ ಇಂದು ವಿಶಾಖಪಟ್ಟಣಂನ ACA–VDCA ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಸಂಜೆ 7:00 ಗಂಟೆಗೆ ಆರಂಭವಾಗಲಿದ್ದು, ಟಾಸ್ ಸಂಜೆ 6:30ಕ್ಕೆ ನಡೆಯಲಿದೆ.
ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರ ಪ್ರಸಾರವಾಗಿ ವೀಕ್ಷಿಸಬಹುದಾಗಿದ್ದು, ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿಯೂ ಲೈವ್ ಸ್ಟ್ರೀಮಿಂಗ್ ಲಭ್ಯವಿರಲಿದೆ.
ಉಭಯ ತಂಡಗಳು
ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ದೀಪ್ತಿ ಶರ್ಮಾ, ಸ್ನೇಹ ರಾಣಾ, ಜೆಮಿಮಾ ರಾಡ್ರಿಗಸ್, ಶೆಫಾಲಿ ವರ್ಮಾ, ಹರ್ಲೀನ್ ಡಿಯೋಲ್, ಅಮನ್‌ಜೋತ್ ಕೌರ್, ಅರುಂಧತಿ ರೆಡ್ಡಿ, ಕ್ರಾಂತಿ ಗೌಡ್, ರೇಣುಕಾ ಸಿಂಗ್ ಠಾಕೂರ್, ರಿಚಾ ಘೋಷ್ (ವಿಕೆಟ್ ಕೀಪರ್), ಜಿ ಕಮಲಿನಿ (ವಿಕೆಟ್ ಕೀಪರ್), ಶ್ರೀ ಚರಣಿ, ವೈಷ್ಣವಿ ಶರ್ಮಾ.
ಶ್ರೀಲಂಕಾ ತಂಡ: ಚಾಮರಿ ಅಟಪಟ್ಟು (ನಾಯಕಿ), ಹಾಸಿನಿ ಪೆರೇರಾ, ವಿಶ್ಮಿ ಗುಣರತ್ನೆ, ಹರ್ಷಿತಾ ಸಮರವಿಕ್ರಮ, ನೀಲಾಕ್ಷಿಕಾ ಡಿ ಸಿಲ್ವಾ, ಕವಿಶಾ ದಿಲ್ಹಾರಿ, ಇಮೇಶಾ ದುಲಾನಿ, ಕೌಶಿನಿ ನುತ್ಯಾಂಗನಾ, ಮಲ್ಶಾ ಶೆಹಾನಿ, ಇನೋಕಾ ರಣವೀರ, ಶಶಿನಿ ಗಿಮ್ಹಾನಿ, ನಿಮೇಶ್ ಮದುಶಾನಿ, ಕಾವ್ಯಾ ಕವಿಂದಿ, ರಶ್ಮಿಕಾ ಸೆವ್ವಂದಿ, ಮಾಲ್ಕಿ ಮಾದರ.



