ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಸೈಟ್ ಅಕ್ರಮ ಆರೋಪ ಪ್ರಕರಣದ ವಿಚಾರಣೆಯನ್ನು ಕೋರ್ಟ್ ಜನವರಿ 5ಕ್ಕೆ ಮುಂದೂಡಿದೆ.
ಮುಡಾ ಸೈಟ್ ಹಗರಣದಲ್ಲಿ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್‌ನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ನಡೆಯಿತು. ತನಿಖೆ ಪೂರ್ಣಗೊಂಡಿದ್ದರೂ ಬಾಕಿ ಇದೆ ಎಂದು ಅಧಿಕಾರಿಗಳು ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದರು.
ಎ1 ಆಗಿರುವ ಹಾಲಿ ಸಿಎಂ ಅವರನ್ನು ನಿರಪರಾಧಿಯಾಗಿ ತೋರಿಸುವ ಪ್ರಯತ್ನ ನಡೆದಿದೆ ಎಂದು ವಾದಿಸಿ, ಆರೋಪ ಸಾಬೀತಾದಲ್ಲಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಾಗುತ್ತದೆ ಎಂದರು. ಅಲ್ಲದೆ ತನಿಖಾಧಿಕಾರಿ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಕೋರಿದರು. ಪ್ರಕರಣದ ಮುಂದಿನ ವಿಚಾರಣೆಯನ್ನು ಕೋರ್ಟ್ ಜನವರಿ 5ಕ್ಕೆ ನಿಗದಿಪಡಿಸಿದೆ.



