ಸುದೀಪ್ ಹಾಗೂ ದರ್ಶನ್ ಅಭಿಮಾನಿಗಳ ನಡುವೆ ಫ್ಯಾನ್ಸ್‌ವಾರ್ ತಾರಕಕ್ಕೇರಿರುವ ಸಂದರ್ಭದಲ್ಲೇ ಕಿಚ್ಚ ಸುದೀಪ್ ನೀಡಿದ ಪ್ರತಿಕ್ರಿಯೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ದರ್ಶನ್ ಜೊತೆಗಿನ ಫೋಟೋ ಕುರಿತು ಕೇಳಿದ ಅಭಿಮಾನಿಯ ಪ್ರಶ್ನೆಗೆ ಸುದೀಪ್, “ಅವರಿಗೆ ಸದಾ ಒಳ್ಳೆಯದನ್ನೇ ಬಯಸುತ್ತೇನೆ” ಎಂದು ಉತ್ತರಿಸಿದ್ದಾರೆ.
ಈ ಉತ್ತರ ಸುದೀಪ್ ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ ಎಂದು ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸ್ಟಾರ್‌ವಾರ್ ಜೋರಾಗಿರುವ ಹೊತ್ತಿನಲ್ಲಿ ವಿವಾದಕ್ಕೆ ಆಹಾರ ನೀಡದೇ, ಶಾಂತ ಮತ್ತು ಸಕಾರಾತ್ಮಕ ನಿಲುವು ತಳೆದಿದ್ದಾರೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ದರ್ಶನ್ ಬಗ್ಗೆ ಸುದೀಪ್ ಒಳ್ಳೆಯ ಭಾವನೆ ಇಟ್ಟುಕೊಂಡಿದ್ದಾರೆ ಎಂಬುದನ್ನು ಈ ಮಾತೇ ಸ್ಪಷ್ಟಪಡಿಸಿದೆ ಎನ್ನಲಾಗುತ್ತಿದೆ. ಈ ಮೂಲಕ ಸ್ಟಾರ್‌ವಾರ್ ಗಲಾಟೆಗೆ ತೆರೆ ಬೀಳುತ್ತದೆಯೇ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದ್ದು, ಮುಂದಿನ ದಿನಗಳೇ ಇದಕ್ಕೆ ಉತ್ತರ ನೀಡಬೇಕಿದೆ.



