ಮೆಲ್ಬೋರ್ನ್: ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಪಂದ್ಯ ಗೆಲ್ಲುವ 14 ವರ್ಷಗಳ ಕನಸು ಇಂಗ್ಲೆಂಡ್ ತಂಡಕ್ಕೆ ಕೊನೆಗೂ ಈಡೇರಿದೆ. ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡಿನಲ್ಲಿ ಆ್ಯಶಸ್ ಸರಣಿಯ ನಾಲ್ಕನೇ ಟೆಸ್ಟ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ 4 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿದೆ.
ಇಂಗ್ಲೆಂಡ್ ತಂಡವು ಆಸ್ಟ್ರೇಲಿಯಾದಲ್ಲಿ ಕೊನೆಗೂ ಟೆಸ್ಟ್ ಪಂದ್ಯ ಗೆದ್ದಿದ್ದು, ಇದಕ್ಕೂ ಮುನ್ನ 2011 ರಲ್ಲಿ ಮಾತ್ರ ಸಾಧ್ಯವಾಗಿತ್ತು. 2011 ರ ಐದನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆಸ್ಟ್ರೇಲಿಯಾ ವಿರುದ್ಧ ಇನ್ನುಂಗ್ಸ್ ಮತ್ತು 83 ರನ್ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಅಮೋಘ ಗೆಲುವಿನ ನಂತರ, ಆಸೀಸ್ ದೇಶದಲ್ಲಿ ಇಂಗ್ಲೆಂಡ್ ತಂಡ ಯಾವ ಟೆಸ್ಟ್ ಪಂದ್ಯದಲ್ಲಿಯೂ ಜಯ ಸಾಧಿಸಲಿಲ್ಲ.
ಹದಿನಾಲ್ಕು ವರ್ಷಗಳ ಅವಧಿಯಲ್ಲಿ ಇಂಗ್ಲೆಂಡ್ ಆಸ್ಟ್ರೇಲಿಯಾದಲ್ಲಿ 18 ಟೆಸ್ಟ್ ಪಂದ್ಯಗಳಲ್ಲಿ ಭಾಗವಹಿಸಿದ್ದರೂ, 16 ಮ್ಯಾಚ್ಗಳಲ್ಲಿ ಸೋಲು ಅನುಭವಿಸಿದ್ದು, 2 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದ್ದರು. ಅಂದರೆ ಈ ಹಿಂದೆ ಇಂಗ್ಲೆಂಡ್ ತಂಡ ಆಸೀಸ್ ನ ತವರಿನಲ್ಲಿ ಗೆಲುವು ಕಾಣದಿರುವುದೇ ಅಚ್ಚರಿ.
ಇದೀಗ ಮೆಲ್ಬೋರ್ನ್ ಮೈದಾನದಲ್ಲಿ ಆತಿಥೇಯರನ್ನು 4 ವಿಕೆಟ್ ಅಂತರದಿಂದ ಸೋಲಿಸಿ, ಇಂಗ್ಲೆಂಡ್ ತಂಡವು ಆಸ್ಟ್ರೇಲಿಯಾ ಪಿಚ್ನಲ್ಲಿ 14 ವರ್ಷಗಳ ಬಳಿಕ ಗೆಲುವಿನ ನಗೆ ಬೀರಿದೆ.



