ಮೈಸೂರು: ನಗರದ ಅರಮನೆ ಮುಂಭಾಗ ನಡೆದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಮೈಸೂರು ಅರಮನೆ ಒಳಗೆ ಶ್ವಾನದಳ ಹಾಗೂ ಸ್ಫೋಟಕ ಪತ್ತೆ ದಳದಿಂದ ತಪಾಸಣೆ ನಡೆಸಲಾಗಿದ್ದು, ಪ್ರತಿದಿನವೂ ಕಟ್ಟುನಿಟ್ಟಿನ ಪರಿಶೀಲನೆ ಮುಂದುವರಿದಿದೆ. ಮೃಗಾಲಯ, ಚಾಮುಂಡಿ ಬೆಟ್ಟ, ಸಂತ ಫಿಲೋಮಿನಾ ಚರ್ಚ್ ಸೇರಿದಂತೆ ಪ್ರಮುಖ ಪ್ರವಾಸಿ ಕೇಂದ್ರಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಅನುಮಾನಸ್ಪದ ವ್ಯಕ್ತಿಗಳನ್ನು ವಿಚಾರಣೆಗೂ ಒಳಪಡಿಸಲಾಗಿದೆ.
ದೇಶ-ವಿದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮೈಸೂರು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು, ಪ್ರವಾಸಿಗರ ಸುರಕ್ಷತೆಗೆ ವಿಶೇಷ ಕ್ರಮಗಳನ್ನು ಕೈಗೊಂಡಿದ್ದಾರೆ.



