ಬೆಂಗಳೂರು: ಹೊಸ ವರ್ಷಾಚರಣೆಗೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಗುಡ್ನ್ಯೂಸ್ ನೀಡಿದೆ.
ಡಿಸೆಂಬರ್ 31ರಂದು ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ಸೇವೆಯನ್ನು ವಿಸ್ತರಿಸಲಾಗಿದ್ದು, ಕೊನೆಯ ರೈಲು ರಾತ್ರಿ 2:45ರವರೆಗೆ ಸಂಚರಿಸಲಿದೆ. ನೇರಳೆ ಮಾರ್ಗದಲ್ಲಿ ಬೈಯಪ್ಪನಹಳ್ಳಿಯಿಂದ ಕೆಂಗೇರಿಗೆ ರಾತ್ರಿ 1:45ಕ್ಕೆ ಹಾಗೂ ಕೆಂಗೇರಿಯಿಂದ ಬೈಯಪ್ಪನಹಳ್ಳಿಗೆ ರಾತ್ರಿ 2ಕ್ಕೆ ಕೊನೆಯ ರೈಲು ಹೊರಡಲಿದೆ.
ಹಸಿರು ಮಾರ್ಗದಲ್ಲಿ ಮೆಜೆಸ್ಟಿಕ್–ನಾಗಸಂದ್ರ ಎರಡೂ ದಿಕ್ಕಿಗೂ ರಾತ್ರಿ 2 ಗಂಟೆಗೆ ಕೊನೆಯ ರೈಲು ಇರುತ್ತದೆ. ಹಳದಿ ಮಾರ್ಗದಲ್ಲಿ ಆರ್ವಿ ರಸ್ತೆಯಿಂದ ಬೊಮ್ಮಸಂದ್ರಕ್ಕೆ ರಾತ್ರಿ 3:10ಕ್ಕೆ ಹಾಗೂ ಬೊಮ್ಮಸಂದ್ರದಿಂದ ಆರ್ವಿ ರಸ್ತೆಗೆ ರಾತ್ರಿ 1:30ಕ್ಕೆ ಕೊನೆಯ ರೈಲು ಸಂಚರಿಸಲಿದೆ. ಡಿಸೆಂಬರ್ 31ರ ರಾತ್ರಿ 11ರಿಂದ ನೇರಳೆ ಹಾಗೂ ಹಸಿರು ಮಾರ್ಗಗಳಲ್ಲಿ 8 ನಿಮಿಷಗಳ ಅಂತರದಲ್ಲಿ, ಹಳದಿ ಮಾರ್ಗದಲ್ಲಿ 15 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ. ಹೆಚ್ಚಿನ ಜನಸಂದಣಿ ಹಿನ್ನೆಲೆಯಲ್ಲಿ ರಾತ್ರಿ 11 ನಂತರ ಟಿಕೆಟ್ ಕೌಂಟರ್ಗಳು ಬಂದ್ ಆಗಲಿದ್ದು, ಕ್ಯೂಆರ್ ಕೋಡ್ ಅಥವಾ ಸ್ಮಾರ್ಟ್ ಕಾರ್ಡ್ ಬಳಸಿ ಪ್ರಯಾಣಿಸಬೇಕೆಂದು ಸೂಚಿಸಲಾಗಿದೆ.
ಇದೇ ವೇಳೆ ರಾತ್ರಿ 10ರಿಂದ ಎಂಜಿ ರೋಡ್ ಮೆಟ್ರೋ ನಿಲ್ದಾಣವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.



