ಕಲಬುರಗಿ: ಅಟ್ರಾಸಿಟಿ ಪ್ರಕರಣದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟು ಹಣ ಸ್ವೀಕರಿಸುತ್ತಿದ್ದ ವೇಳೆ ಕಲಬುರಗಿ ಹೈಕೋರ್ಟ್‌ನ ಸರ್ಕಾರಿ ಅಭಿಯೋಜಕ (ಪಬ್ಲಿಕ್ ಪ್ರಾಸಿಕ್ಯೂಟರ್) ರಾಜಮಹೇಂದ್ರ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಸರ್ಕಾರಿ ಅಭಿಯೋಜಕ ರಾಜಮಹೇಂದ್ರ ಪ್ರಕರಣದಲ್ಲಿ ಅನುಕೂಲ ಮಾಡಿಕೊಡುವುದಾಗಿ ಹೇಳಿ ದೂರುದಾರ ನವೀನ್ ಎಂಬುವರಿಂದ 50 ಸಾವಿರ ರೂಪಾಯಿ ಲಂಚ ಬೇಡಿಕೆ ಇಟ್ಟಿದ್ದರು. ಈ ಪೈಕಿ 25 ಸಾವಿರ ರೂಪಾಯಿಯನ್ನು ಮುಂಗಡವಾಗಿ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಈ ಕಾರ್ಯಾಚರಣೆ ಕಲಬುರಗಿ ಹೈಕೋರ್ಟ್ ಮುಂಭಾಗದಲ್ಲಿ ನಡೆದಿದ್ದು, ಲಂಚದ ಹಣ ಸಹಿತವಾಗಿ ಆರೋಪಿಯನ್ನು ರೆಡ್‌ಹ್ಯಾಂಡ್ ಬಂಧಿಸಲಾಗಿದೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ಹಾಗೂ ಡಿವೈಎಸ್ಪಿ ಶೀಲವಂತ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.



