ಚಿತ್ರದುರ್ಗ: ಗ್ಯಾಸ್ ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಯುವತಿ ಸಾವನ್ನಪ್ಪಿರುವ ದುರ್ಘಟನೆ ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ವಿನಾಯಕ ಕಲ್ಯಾಣ ಮಂಟಪದ ಬಳಿ ನಡೆದಿದೆ. ಮೃತ ಯುವತಿಯನ್ನು ನೂತನ (20) ಎಂದು ಗುರುತಿಸಲಾಗಿದೆ.
ನೂತನ ಡಾನ್ ಬೋಸ್ಕೋ ಡಿಗ್ರಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಎಸ್.ಸಿ. ವಿದ್ಯಾರ್ಥಿನಿಯಾಗಿದ್ದಳು.
ಸ್ನಾನಕ್ಕೆಂದು ಬಾತ್ ರೂಮ್ಗೆ ತೆರಳಿದ್ದ ವೇಳೆ ಗೀಸರ್ನಿಂದ ಗ್ಯಾಸ್ ಸೋರಿಕೆಯಾಗಿದೆ. ಈ ವೇಳೆ ಬಾತ್ ರೂಮ್ ಬಾಗಿಲು ಹಾಗೂ ಕಿಟಕಿಗಳು ಮುಚ್ಚಿದ್ದರಿಂದ ಯುವತಿಗೆ ಉಸಿರುಗಟ್ಟಿ ಅಸ್ವಸ್ಥತೆಗೆ ಕಾರಣವಾಗಿದೆ.
ಅಸ್ವಸ್ಥಗೊಂಡಿರುವುದನ್ನು ಗಮನಿಸಿದ ಪೋಷಕರು ಕೂಡಲೇ ಆಸ್ಪತ್ರೆಗೆ ರವಾನೆ ಮಾಡಿದರು. ಆದರೆ, ಅಷ್ಟರಲ್ಲೇ ಯುವತಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಘಟನೆ ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.



