ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಕಳಸಾಪುರ ರಸ್ತೆಯಲ್ಲಿರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 4ನೇ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ರಾಯಲ್ ಕರಾಟೆ ಕ್ಲಬ್ ಹಾಗೂ ಶ್ರೀ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯ ಕ್ರೀಡಾಪಟುಗಳಾದ ಅನನ್ಯ ಆರೇರ ಕಟಾ ವಿಭಾಗದಲ್ಲಿ ಪ್ರಥಮ, ವಿಹಾನ ವಗ್ಗನವರ-ಪ್ರಥಮ, ಲಿಂಗರಾಜ ಹಾಳಕೇರಿ ತೃತೀಯ, ವರುಣ ಜಿನಗಿ ಕುಮಟೆ ಹಾಗೂ ಕಟಾ ವಿಭಾಗದಲ್ಲಿ ತೃತೀಯ ಹಾಗೂ ಭರತ್ ಇರಾಳ್ ಸಮಾಧಾನಕರ ಪ್ರಶಸ್ತಿ ಪಡೆದಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ, ತರಬೇತುದಾರ ಸುಲೇಮಾನ ದೊಡ್ಡಮನಿ ಅವರನ್ನು ಶ್ರೀ ರಾಜೇಶ್ವರಿ ವಿದ್ಯಾನಿಕೇತನ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಪಾಲಕರು ಅಭಿನಂದಿಸಿದ್ದಾರೆ.



