ವಿಜಯಸಾಕ್ಷಿ ಸುದ್ದಿ, ಗದಗ: 2025-26ನೇ ಸಾಲಿನ ಗದಗ ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ರೋಣ ತಾಲೂಕು ಪಂಚಾಯಿತಿಯ ವ್ಯವಸ್ಥಾಪಕರಾದ ದೇವರಾಜ್ ಸಜ್ಜನಶೆಟ್ಟರ ಬ್ಯಾಡ್ಮಿಂಟನ್ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಸಿಂಗಲ್ಸ್ ಹಾಗೂ ಡಬಲ್ಸ್ ಎರಡೂ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಡಬಲ್ಸ್ ವಿಭಾಗದಲ್ಲಿ ದೇವರಾಜ್ ಸಜ್ಜನಶೆಟ್ಟರ ಅವರಿಗೆ ಜಿಲ್ಲಾ ಅಲ್ಪಸಂಖ್ಯಾತ ಇಲಾಖೆ ಅಧಿಕಾರಿ ಅಮಿತ್ ಬಿದರಿ ಅವರು ಜೊತೆಯಾಗಿದ್ದು, ಇಬ್ಬರೂ ಶ್ರೇಷ್ಠ ಆಟ ಪ್ರದರ್ಶಿಸಿ ಪ್ರಥಮ ಬಹುಮಾನಕ್ಕೆ ಭಾಜನರಾಗಿದ್ದಾರೆ. ಈ ಸಾಧನೆಯ ಮೂಲಕ ದೇವರಾಜ್ ಸಜ್ಜನಶೆಟ್ಟರ ಅವರು ಆರ್‌ಡಿಪಿಆರ್ (ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್) ಇಲಾಖೆಗೆ ಹಾಗೂ ರೋಣ ತಾಲೂಕು ಪಂಚಾಯಿತಿಗೆ ಕೀರ್ತಿ ತಂದಿದ್ದಾರೆ. ಅವರ ಈ ಯಶಸ್ಸಿಗೆ ಇಲಾಖೆಯ ಅಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.



