ಚಿತ್ರದುರ್ಗ:- ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನತ್ತ ಸಾಗುತ್ತಿದ್ದ ಟ್ಯಾಂಕರ್‌ಗೆ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.
ತೆಲಂಗಾಣಕ್ಕೆ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಅನಿತಾ ಎಂಬ ಮಹಿಳೆ ಇದ್ದು, ಅಪಘಾತದ ತೀವ್ರತೆಯಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಲಾಯಿಸುತ್ತಿದ್ದ ಅವರ ಪತಿ ಬಾಲಾಜಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.



