ನಾಳೆಯಿಂದ ಪ್ರಚಾರಕ್ಕೆ ಹೋಗುವೆ: ಸಿಎಂ ಬೊಮ್ಮಾಯಿ

Vijayasakshi (Gadag News) :

ವಿಜಯಸಾಕ್ಷಿ ಸುದ್ದಿ, ಮೈಸೂರು

ನಾಳೆಯಿಂದ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು‌ ದಿನಗಳ‌ ಕಾಲ ಉಪಚುನಾವಣೆ ಪ್ರಚಾರಕ್ಕೆ ಹೋಗುತ್ತೇನೆ. ಎರಡು‌ ದಿನ ಹಾನಗಲ್, ಎರಡು ದಿನ‌ ಸಿಂದಗಿಯಲ್ಲಿ ಪ್ರಚಾರ ಮಾಡುತ್ತೇನೆ. ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದಸರಾ ಸಂದರ್ಭದಲ್ಲಿ ಟೂರಿಸಂ ಸರ್ಕ್ಯೂಟ್ ಮಾಡುತ್ತೇವೆ. ದಸರಾ ವಸ್ತು ಪ್ರದರ್ಶನವನ್ನು 365 ದಿನ ಬಳಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಇದಕ್ಕೆ ಎಲ್ಲರ ಜೊತೆ ಮಾತುಕತೆ ನಡೆಸುತ್ತೇನೆ. ಈ‌ ಬಾರಿಯ ದಸರಾ ಅತ್ಯಂತ ಯಶಸ್ವಿಯಾಗಿ ಮುಕ್ತಾಯವಾಗಿದೆ. ಮುಂದಿನ‌ ವರ್ಷ ಅದ್ದೂರಿಯಾಗಿ ದಸರಾ ನಡೆಸುತ್ತೇವೆ ಎಂದು ಹೇಳಿದರು.

ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTube ಅನುಸರಿಸಿKannada News Kannada News Today
Leave A Reply

Your email address will not be published.

six − 3 =