ಚಿತ್ರದುರ್ಗ:- ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಂದನೂರು ಬಳಿ ಮರಕ್ಕೆ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ಜರುಗಿದೆ.
ಮೃತರನ್ನು ಕಿರಣ್(25), ಅರುಣ್(32), ಹನುಮಂತ(32) ಮತ್ತು ಗಿರಿರಾಜ್(46) ಎಂದು ಗುರುತಿಸಲಾಗಿದೆ. ಇನ್ನುಳಿದ ನಾಲ್ವರು ಕಾರ್ಮಿಕರಿಗೆ ಗಾಯಗಳಾಗಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಲ್ಲಿ ಅಡಕೆ ಲೋಡ್ ಇಳಿಸಿ ಕಾರ್ಮಿಕರು ವಾಪಸ್ ಬರುವಾಗ ಅಪಘಾತ ಸಂಭವಿಸಿದೆ. ದುರಂತದಲ್ಲಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ದಾವಣಗೆರೆ ಆಸ್ಪತ್ರೆಯಲ್ಲಿ ಮತ್ತಿಬ್ಬರು ಕಾರ್ಮಿಕರು ಕೊನೆಯುಸಿರೆಳೆದಿದ್ದಾರೆ. ಮೃತ ಕಾರ್ಮಿಕರು ಕಲ್ಲವ್ವ ನಾಗತಿಹಳ್ಳಿ ಗ್ರಾಮದವರು ಎನ್ನಲಾಗಿದೆ.
ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



