ಡಿಕೆಶಿ ವಿರುದ್ಧ ಸಿದ್ದರಾಮಯ್ಯ ವ್ಯವಸ್ಥಿತ ಷಡ್ಯಂತ್ರ್ಯ: ಸಂಸದ ಪ್ರತಾಪ ಸಿಂಹ ಆರೋಪ

Vijayasakshi (Gadag News) :

ವಿಜಯಸಾಕ್ಷಿ ಸುದ್ದಿ, ಮೈಸೂರು


ಡಿಕೆಶಿ ವಿರುದ್ಧದ ಆರೋಪ ಸಿದ್ದರಾಮಯ್ಯ ಅವರ ವ್ಯವಸ್ಥಿತವಾದ ಷಡ್ಯಂತ್ರ್ಯ ಎಂದು ಸಂಸದ ಪ್ರತಾಪ್ ಸಿಂಹ ಹೊಸ ಬಾಂಬ್ ಸಿಡಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿಯವರಿಂದ ಬಿಜೆಪಿ ಬಗ್ಗೆ ಮತ್ತಷ್ಟು ಒಳ್ಳೆಯ ಹೆಸರು ಬಂದಿದೆ. ಎರಡೂ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ. ಇದಕ್ಕೆ ವಿರೋಧ ಪಕ್ಷದವರೇ ಅನುಕೂಲ ಮಾಡಿಕೊಟ್ಟಿದ್ದಾರೆ. ಮಾಧ್ಯಮದವರ ಮುಂದೆಯೇ ಸಲೀಂ- ಉಗ್ರಪ್ಪ ಮಾತಾಡಿದ್ದಾರೆ. ಡಿಕೆಶಿಯವರನ್ನು ವ್ಯವಸ್ಥಿತವಾಗಿ ರಾಜಕೀಯವಾಗಿ ಮುಗಿಸುವ ಷಡ್ಯಂತ್ರ್ಯ ಎಂದು ದೂರಿದರು.

ಸಲೀಂ ಅವರು ಈಗಿರುವ ಸ್ಥಾನಕ್ಕೆ ಕಾರಣ ಡಿಕೆಶಿ. ಉಗ್ರಪ್ಪ ಸಂಸದರಾಗಲು ಅವರ ಪಾತ್ರ ಮಹತ್ವದ್ದು, ಆದರೆ, ಇಷ್ಟೆಲ್ಲ ಇದ್ದರೂ ಡಿಕೆಶಿಯವರನ್ನು ಟಾರ್ಗೆಟ್ ಮಾಡಲಾಗಿದೆ‌. ಇದಕ್ಕೆ ಸಿದ್ದರಾಮಯ್ಯ ನೇರ ಕಾರಣ ಎಂದರು.

‌ಹೀಗಾಗಿಯೇ ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯಗೆ ಬನ್ನಿ ಎಂದು ಹೈಕಮಾಂಡ್ ಹೇಳಿದೆ‌. ಇದರಿಂದ ಎಲ್ಲಿ ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕೆಂದು ಈ ರೀತಿ ಡಿಕೆಶಿ ಮೇಲೆ ಸಿದ್ದರಾಮಯ್ಯ ಷಡ್ಯಂತ್ರ್ಯ ಮಾಡಿದ್ದಾರೆ. ಇದು ಸಂಪೂರ್ಣ ಸಿದ್ದರಾಮಯ್ಯ ಅವರಿಂದಲೇ ನಡೆದಿರುವ ಷಡ್ಯಂತ್ರ್ಯ ಎಂದು ಪ್ರತಾಪ್ ಸಿಂಹ ಆರೋಪಿಸಿದರು.

ಸಿದ್ದರಾಮಯ್ಯ ಎಲಿಮೆನೆಟರಿ ಆಗಿ ಕೆಲಸ ಮಾಡುತ್ತಿದ್ದಾರೆ. ದೆಹಲಿಗೆ ಬನ್ನಿ ಎಂದಾಗ ಸಿದ್ದರಾಮಯ್ಯ ವಿಚಲಿತರಾಗಿ ಹೀಗೆ ಮಾಡಿಸಿದ್ದಾರೆ. ಇದರಿಂದ ಕಾಂಗ್ರೆಸ್ ಸಂಪೂರ್ಣವಾಗಿ ನಾಶವಾಗುತ್ತದೆ. ಅನಾಯಾಸವಾಗಿ ಇದರ ಲಾಭ ಬಿಜೆಪಿಗೆ ಬರಲಿದೆ ಎಂದು ಹೇಳಿದರು.

ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTube ಅನುಸರಿಸಿ