ಗದಗ: ಇತ್ತೀಚೆಗೆ ನಗರದ ಕೆ.ಎಚ್. ಪಾಟೀಲ ಕ್ರೀಡಾಂಗಣದಲ್ಲಿ ಜರುಗಿದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ರೋಣ ತಾಲೂಕು ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಜಗದೀಶಚಂದ್ರ ಆಲದಕಟ್ಟಿ ಅವರು 108 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಬಕಾರಿ ಇಲಾಖೆಯ ಅಬಕಾರಿ ಉಪ ಆಯುಕ್ತರು, ಅಧೀಕ್ಷಕರು ಹಾಗೂ ಉಪಾಧ್ಯಕ್ಷರು ಹಾಗೂ ಸಿಬ್ಬಂದಿ ವರ್ಗದವರು ಜಗದೀಶಚಂದ್ರ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
Trending Now



