ತುಮಕೂರು:- ತುಮಕೂರಿನ ಬೆಳ್ಳಾವಿ ಕ್ರಾಸ್ ಸಮೀಪ ಭೀಕರ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ.
ಕೊಪ್ಪಳ ಮೂಲದವರಾದ ಮೃತರೆಲ್ಲರೂ ತಮ್ಮೂರಿಗೆ ತೆರಳುತ್ತಿದ್ದ ವೇಳೆ ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸ್ಥಳೀಯ ಪೊಲೀಸರು ಮೃತ ದೇಹಗಳನ್ನ ತುಮಕೂರು ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನೆ ಮಾಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.



