ಹುಬ್ಬಳ್ಳಿ: ನಗರದಲ್ಲಿ ವಿವಾದಕ್ಕೆ ಕಾರಣವಾಗಿರುವ ಸುಜಾತಾ ಹಂಡಿ ಪ್ರಕರಣದಲ್ಲಿ ಪೊಲೀಸ್ ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಕೇಶ್ವಾಪುರ ಪೊಲೀಸ್ ಠಾಣೆ ಪೊಲೀಸರು ಸುಜಾತಾ ಹಂಡಿಯ ಕುಟುಂಬಸ್ಥರಾದ ಸಹೋದರ ಮರಿಯಾದಾಸ್ ಹಾಗೂ ತಾಯಿ ಕಮಲಮ್ಮ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಪೊಲೀಸರು ಮನೆಗೆ ತೆರಳಿ ನೋಟಿಸ್ ನೀಡಿ ಸಹಿ ಪಡೆದುಕೊಂಡಿದ್ದಾರೆ. ಠಾಣೆಗೆ ಬಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಸೂಚಿಸಲಾಗಿದೆ. ಈ ಪ್ರಕರಣವು ಜನವರಿ 2 ರಂದು ಪ್ರಶಾಂತ್ ಬೊಮ್ಮಾಜಿ ನೀಡಿದ ದೂರಿನ ಆಧಾರದಲ್ಲಿ ದಾಖಲಾಗಿದ್ದು, ಸುಜಾತಾ ಹಂಡಿ ಸೇರಿ ಏಳು ಜನರ ವಿರುದ್ಧ ಕೇಸ್ ದಾಖಲಾಗಿತ್ತು.
ಇದೇ ಪ್ರಕರಣದಲ್ಲಿ ಈಗಾಗಲೇ ಸುಜಾತಾ ಹಂಡಿಯನ್ನು ಬಂಧಿಸಿರುವ ಪೊಲೀಸರು, ತನಿಖೆಯ ಭಾಗವಾಗಿ ಉಳಿದ ಆರೋಪಿಗಳು ಮತ್ತು ಸಂಬಂಧಪಟ್ಟವರ ವಿಚಾರಣೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಕೇಶ್ವಾಪುರ ಠಾಣೆ ಪೊಲೀಸರು ಪ್ರಕರಣದ ಸತ್ಯಾಸತ್ಯತೆ ಪತ್ತೆ ಹಚ್ಚುವ ನಿಟ್ಟಿನಲ್ಲಿ ತನಿಖೆ ಮುಂದುವರಿಸಿದ್ದಾರೆ.



