ಕಾರವಾರ:- JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಇದೀಗ ಆರೋಪಿ ಎಸ್ಕೇಪ್ ಆಗಿದ್ದಾನೆ.
ಯುವತಿಯನ್ನ ಪ್ರೀತಿಸುವಂತೆ ಪೀಡಿಸಿ ಆತ್ಮಹತ್ಯೆಗೆ ಕಾರಣವಾಗಿದ್ದ ಕಾರವಾರದ ಜೆಡಿಎಸ್ ಮುಖಂಡೆ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಚೈತ್ರಾ ಕೊಠಾರಕರ್ ಅವರ ಪುತ್ರ ಚಿರಾಗ್ ಪರಾರಿಯಾಗಿದ್ದಾನೆ.
ಆರೋಪಿಯು, ಯುವತಿಗೆ ಪ್ರೀತಿಸುವಂತೆ ಪೀಡಿಸುತಿದ್ದ. ಆಕೆ ಪ್ರೀತಿಯನ್ನು ತಿರಸ್ಕಾರ ಮಾಡಿದ ಹಿನ್ನೆಲೆಯಲ್ಲಿ ಆಕೆಗೆ ಕರೆ ಮಾಡಿ ಕಿರುಕುಳ ನೀಡುತಿದ್ದ. ಹೀಗಾಗಿ ಚಿರಾಗ್ ನಿಂದ ಬೇಸತ್ತ ಯುವತಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದರ ಬೆನ್ನಲ್ಲೇ ಭಾನುವಾರ ಚಿರಾಗ್ ವಿರುದ್ಧ ಕದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾದ ಬೆನ್ನಲ್ಲೇ ಕದ್ರಾ ಪೊಲೀಸರು ಆತನನ್ನು ಬಂಧಿಸಲು ಕಾರವಾರದ ನಂದನಗದ್ದಾ ದಲ್ಲಿ ಇರುವ ಆತನ ನಿವಾಸಕ್ಕೆ ಇಂದು ತೆರಳಿದ್ದು ಬಂಧನ ಭೀತಿಯಿಂದ ಚಿರಾಗ್ ಪರಾರಿಯಾಗಿದ್ದಾನೆ.
ಈ ಹಿನ್ನೆಲೆಯಲ್ಲಿ ಕದ್ರಾ ಪೊಲೀಸರು ವಿಶೇಷ ತಂಡ ರಚಿಸಿ ಈತನ ಹುಡುಕಾಟ ನಡೆಸುತಿದ್ದಾರೆ.



