HomeGadag Newsಸಾಹಿತ್ಯದಿಂದ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣ: ವಿವೇಕಾನಂದಗೌಡ ಪಾಟೀಲ 

ಸಾಹಿತ್ಯದಿಂದ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣ: ವಿವೇಕಾನಂದಗೌಡ ಪಾಟೀಲ 

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಾಹಿತ್ಯ, ಸಂಸ್ಕೃತಿಯ ವಾರಸುದಾರರಾಗಿರುವ ಯುವಜನಾಂಗ ವಿದ್ಯಾರ್ಥಿ ದೆಸೆಯಿಂದಲೇ ಅಭಿರುಚಿಯನ್ನು ಬೆಳೆಸಿಕೊಂಡು ಸಹೃದಯತೆ ಹೊಂದಬೇಕು. ಕಲೆ, ಸಾಹಿತ್ಯ, ಸಂಗೀತವಿಲ್ಲದ ಬದುಕು ಪಶು ಸಮಾನ ಎಂಬ ಹೇಳಿಕೆ ಇದೆ. ವಿವಿಧ ಕೃತಿಗಳನ್ನು ಓದುವ ಮೂಲಕ ವಿಶಾಲ ಜಗತ್ತಿಗೆ ತೆರೆದುಕೊಂಡಾಗ ಸಂಕುಚಿತತೆ ಕಡಿಮೆಯಾಗಿ ಪರಿಪೂರ್ಣ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ಹೇಳಿದರು.

ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸ್ವಾಮಿ ವಿವೇಕಾನಂದ ಜನ್ಮದಿನದ ನಿಮಿತ್ತ ಯುವ ದಿನಾಚರಣೆ ಅಂಗವಾಗಿ ಜರುಗಿದ ಸಾಹಿತ್ಯಾಭಿರುಚಿ ಸಂವಾದ ಹಾಗೂ ಯುವ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಮೂಹ ಮಾಧ್ಯಮಗಳಲ್ಲಿ ಹೆಚ್ಚು ಸಮಯ ವ್ಯಯ, ಮೊಬೈಲ್ ಗೀಳು, ಪರೀಕ್ಷಾಮುಖಿ ವ್ಯವಸ್ಥೆ, ಓದಿನ ಪೂರಕವಾಗಿರದ ಕುಟುಂಬ ವ್ಯವಸ್ಥೆ, ಶಿಕ್ಷಣ ಮಾಧ್ಯಮದಲ್ಲಿ ಇಂಗ್ಲಿಷ್‌ನ ಪ್ರವೇಶ, ಪಾಲಕರ ಇಂಗ್ಲಿಷ್ ವ್ಯಾಮೋಹ, ಮಾರ್ಗದರ್ಶನದ ಕೊರತೆ ಮುಂತಾದ ಕಾರಣದಿಂದಾಗಿ ಇಂದಿನ ಯುವಕರು ಸಾಹಿತ್ಯದಿಂದ ವಿಮುಖರಾಗುತ್ತಿದ್ದಾರೆ. ಮತ್ತೊಂದೆಡೆ ಸಮೂಹ ಮಾಧ್ಯಮಗಳನ್ನೇ ಸಾಧನವಾಗಿಸಿಕೊಂಡು ಓದು ಮತ್ತು ಕ್ರಿಯಾಶೀಲತೆಯಲ್ಲೂ ತೊಡಗಿಕೊಂಡಿದ್ದಾರೆ. ಉತ್ತಮ ಕೃತಿಗಳನ್ನು ಅಂತರ್ಜಾಲದ ಮೂಲಕ ಪ್ರಚಾರ ಮಾಡಿ ಓದಿನ ಕಡೆಗೆ ಯುವಕರನ್ನು ಸೆಳೆಯುವ ಅಗತ್ಯವಿದೆ ಎಂಬ ಅಭಿಪ್ರಾಯಗಳನ್ನು ಎಂ.ಎಸ್. ಹುಲ್ಲೂರ, ವೀರೇಶ ಹರ್ಲಾಪೂರ, ರಾಜೇಶ್ವರಿ ಬಡ್ನಿ, ಅನುಪ್ರಿಯಾ ಬಾಪುರಿ, ಅನ್ನಪೂರ್ಣ ಕಾಡಣ್ಣವರ, ಮೇಘಾ ಹಾದಿಮನಿ ಸಂವಾದದಲ್ಲಿ ತಿಳಿಸಿದರು.

ನಂತರ ಜರುಗಿದ ಯುವ ಕವಿಗೋಷ್ಠಿಯಲ್ಲಿ ಗಣೇಶ ಪಾಟೀಲ, ಲಕ್ಷ್ಮಿ ಪಾಟೀಲ, ಸಂತೋಷ ಜಿಜ್ಜೇರಿ, ಸಂಗೀತಾ ಜೋಗಿನ, ಅನ್ನಪೂರ್ಣ ಕುರಿ, ಅನಿತಾ ಅರಳಿ ಕವನ ವಾಚಿಸಿದರು. ಅಮರೇಶ ರಾಂಪೂರ ಸ್ವಾಗತಿಸಿದರು. ರಕ್ಷಿತಾ ಗಿಡ್ನಂದಿ ನಿರೂಪಿಸಿದರು. ರಾಹುಲ ಗಿಡ್ನಂದಿ ವಂದಿಸಿದರು.

ಕಾರ್ಯಕ್ರಮದಲ್ಲಿ ಚಂದ್ರಶೇಖರ ವಸ್ತ್ರದ, ವಿದ್ಯಾಧರ ದೊಡ್ಡಮನಿ, ಅನ್ನದಾನಿ ಹಿರೇಮಠ, ಶಶಿಕಾಂತ ಕೊರ್ಲಹಳ್ಳಿ, ವಿ.ಎಸ್. ದಲಾಲಿ, ಕೆ.ಎಸ್. ದಂಡಗಿ, ಕಿಶೋರಬಾಬು ನಾಗರಕಟ್ಟಿ, ಶೈಲಶ್ರೀ ಕಪ್ಪರದ, ಡಿ.ಎಸ್. ಬಾಪುರಿ, ಕೆ.ಎಸ್. ಬಾಳಿಕಾಯಿ, ಎ.ಎಸ್. ಮಕಾನದಾರ, ಬಸವರಾಜ ಗಣಪ್ಪನವರ, ಸಿ.ಎಂ. ಮಾರನಬಸರಿ, ರತ್ನಾ ಪುರಂತರ, ಶೈಲಜಾ ಗಿಡ್ನಂದಿ, ರಾಜಶೇಖರ ಕರಡಿ, ಬಿ.ಬಿ. ಹೊಳಗುಂದಿ, ಶಿಲ್ಪಾ ಮ್ಯಾಗೇರಿ, ಐಶ್ವರ್ಯ ಧರಣೆಪ್ಪಗೌಡರ, ಪ್ರತಿಭಾ ಪಾಟೀಲ, ಪ್ರೇಮಾ ಕಾಡಣ್ಣವರ, ಎಂ.ಎ. ಮಕಾನದಾರ, ಎಸ್.ಪಿ. ಗೌಳಿ, ರವಿ ದೇವರಡ್ಡಿ, ಸಾಕ್ಷಿ ದೇವರಡ್ಡಿ, ವಿ.ಎಸ್. ದಿಂಡೂರ, ಅಂದಾನೆಪ್ಪ ವಿಭೂತಿ, ಸುಧೀರ ಘೋರ್ಪಡೆ, ರಾಮಚಂದ್ರ ಮೋನೆ, ಆನಂದ ಹಡಪದ, ಉಮಾ ಕಣವಿ ಮೊದಲಾದವರು ಉಪಸ್ಥಿತರಿದ್ದರು.

ಯುವ ಸಮೂಹ ಅಂತರ್ಜಾಲದಲ್ಲಿ ತಮ್ಮನ್ನು ತಾವು ಕಳೆದುಕೊಳ್ಳದೇ ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಬೇಕು. ಶ್ರೀಮಂತ ಸಂಸ್ಕೃತಿಯ ಅರಿವನ್ನು ಹೊಂದಬೇಕು. ಯುವಕರಲ್ಲಿರುವ ಅಗಾಧ ಶಕ್ತಿ, ಸಾಮರ್ಥ್ಯ ವ್ಯಕ್ತಿಯ ಉನ್ನತಿಯ ಜೊತೆಗೆ ದೇಶದ ಪ್ರಗತಿಗೆ ಪೂರಕವಾಗಬೇಕು. ಆಗ ಮಾತ್ರ ಸ್ವಾಮಿ ವಿವೇಕಾನಂದರ ಆದರ್ಶ ಪಾಲನೆಯಾಗುತ್ತದೆ ಎಂದು ವಿವೇಕಾನಂದಗೌಡ ಪಾಟೀಲ ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!