HomeGadag Newsಪ್ರಜ್ವಲ್ ರಿತ್ತಿ ಕುಟುಂಬದ ಕಾರ್ಯ ಶ್ಲಾಘನೀಯ

ಪ್ರಜ್ವಲ್ ರಿತ್ತಿ ಕುಟುಂಬದ ಕಾರ್ಯ ಶ್ಲಾಘನೀಯ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಪ್ರಾಮಾಣಿಕತೆಯಿಂದ ನಿಧಿಯನ್ನು ಸರ್ಕಾರಕ್ಕೆ ಮರಳಿಸಿರುವ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ ನಿಧಿಯ ಸಮಾನಾಂತರ ಸಹಾಯ ಧನ ನೀಡುವ ಕುರಿತಂತೆ ಗ್ರಾಮಸ್ಥರ ಒತ್ತಾಯವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಗಮನಕ್ಕೆ ತಂದು ಸೂಕ್ತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಾಜಿ ಸಚಿವ ಬಿ.ಆರ್. ಯಾವಗಲ್ ಹೇಳಿದರು.

ಗ್ರಾಮದ ಪ್ರಜ್ವಲ್ ರಿತ್ತಿ ಅವರ ಕುಟುಂಬವನ್ನು ಭೇಟಿ ಮಾಡಿ ಮಾತನಾಡಿದ ಅವರು ರಿತ್ತಿ ಕುಟುಂಬದವರು ಕಡು ಬಡವರಾಗಿದ್ದಾರೆ. ಸಾಕಷ್ಟು ಸಂಪತ್ತು ಸಿಕ್ಕಿದ್ದರೂ ಸಹಿತ ಯಾವುದೇ ಫಲಾಪೇಕ್ಷೆಯಿಲ್ಲದೆ ಸರ್ಕಾರಕ್ಕೆ ಮರಳಿ ನೀಡಿರುವ ಕಾರ್ಯ ಶ್ಲಾಘನೀಯ. ಪ್ರಜ್ವಲ್‌ಗೆ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ವಿವಿಧ ವಿಭಾಗಗಳ ಪ್ರಶಸ್ತಿಗೆ ಪರಿಗಣಿಸುವುದರ ಮೂಲಕ ನೆರವಿನ ಹಸ್ತವನ್ನು ನೀಡುವ ಮನವಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದರು.

ರಿತ್ತಿ ಕುಟುಂಬಕ್ಕೆ ಪರ್ಯಾಯ ವಸತಿ ಸೌಕರ್ಯ, ಶಿಕ್ಷಣ ಸೌಲಭ್ಯ, ಸೇರಿದಂತೆ ಅನೇಕ ಸಹಾಯಗಳು ದೊರಕುವಂತೆ ಮಾಡುವ ಕಾರ್ಯವನ್ನು ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಹಾಗೂ ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗಳಿ, ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ, ನರಗುಂದ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ವಿವೇಕ ಯಾವಗಲ್, ಗ್ರಾ.ಪಂ ಅಧ್ಯಕ್ಷ ಕೆ.ಎಸ್. ಪೂಜಾರ, ಗ್ರಾ.ಪಂ ಸದಸ್ಯರಾದ ಪೀರಸಾಬ ನದಾಫ್, ಶ್ರೇಯಾ ಕಟಿಗ್ಗಾರ, ಚಂದ್ರವ್ವ ರಿತ್ತಿ, ಅನ್ನಪೂರ್ಣ ರಿತ್ತಿ, ಫಕ್ಕೀರಮ್ಮ ಬೇಲೇರಿ, ಶಾಂತವ್ವ ಮಣಕವಾಡ, ರಜೀಯಾ ಬೇಗಂ ತಹಸೀಲ್ದಾರ, ಮುಖಂಡರಾದ ವೀರಯ್ಯ ಗಂಧದ, ನಿಂಗಪ್ಪ ಗುಂಜಳ, ಅಂದಾನಪ್ಪ ಕಣವಿ, ಮಂಜುನಾಥ ಕಟಿಗ್ಗಾರ, ವಾಸಿಂ ಮಸೂತಿಮನಿ, ಮರದಾನಲಿ ದೊಡ್ಡಮನಿ, ರಸೂಲಸಾಬ ದೌಲತ್ತರ, ಸರ್ಫರಾಜ್, ರಾಘವೇದ್ರ ವಿಠೋಜಿ, ಫಾರೂಕ್ ಮುಲ್ಲಾ, ಮಲ್ಲಪ್ಪ ಸೊರಟೂರ ರಿಯಾಜ್ ಮಸೂತಿಮನಿ ಇದ್ದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img