ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಕಳೆದ ಎರಡು ವರ್ಷಗಳಿಂದ ನಗರ ಪ್ರದೇಶಗಳಲ್ಲಿ ಅಗ್ನಿ ಅವಘಡಗಳು ಹೆಚ್ಚಾಗುತ್ತಿವೆ. ಅದರಲ್ಲೂ ಚಳಿಗಾಲದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಅವಘಡಗಳು ಸಂಭವಿಸುತ್ತಿವೆ. ಅಡುಗೆ ಅನಿಲ ಸೋರಿಕೆ ತಡೆಗಟ್ಟಲು ಪ್ರತಿಯೊಬ್ಬರೂ ಜಾಗೃತಿ ವಹಿಸಬೇಕು ಎಂದು ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.
ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠದ ಆವರಣದಲ್ಲಿ ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಬಲವರ್ಧನೆ ಹಾಗೂ ಜಿಲ್ಲೆಯಲ್ಲಿ ಸಂಭವಿಸಬಹುದಾದ ವಿಪತ್ತುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ಅನಿಲ ಸೋರಿಕೆಯಿಂದ ದುರಂತಗಳನ್ನು ಕಡಿಮೆಗೊಳಿಸುವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಬಗ್ಗೆ ಏರ್ಪಡಿಸಿದ್ದ ಅಣುಕು ಪ್ರದರ್ಶನ (ಔಜಿಜಿsiಣe ಒoಛಿಞ ಜಡಿiಟಟ → ಆಕ್ಸಿಜನ್ ಆನ್ ಫೈರ್ ಡ್ರಿಲ್) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರತಿ 4 ವರ್ಷಗಳಿಗೊಮ್ಮೆ ಅಡುಗೆ ಅನಿಲ ಸಿಲಿಂಡರ್ ಮತ್ತು ಒಲೆಯ ಪೈಪ್ ಬದಲಾಯಿಸಬೇಕು. ಅಗ್ನಿ ಅವಘಡಗಳು ಸಂಭವಿಸಿದಾಗ ಗಾಯಾಳುಗಳಿಗೆ ಯಾವ ರೀತಿಯಲ್ಲಿ ಪ್ರಥಮ ಚಿಕಿತ್ಸೆ ನೀಡಬೇಕು ಎಂಬುದನ್ನು ಸಹ ತಿಳಿಯಪಡಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಡುಗೆ ಅನಿಲ ಸೋರಿಕೆಯಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಗ್ನಿಶಾಮಕ ದಳದ ಅಧಿಕಾರಿಗಳು ಅಣಕು ಪ್ರದರ್ಶನದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರಿಮಾ ಪವಾರ, ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಂ. ಹೊನಕೇರಿ, ಹುಬ್ಬಳ್ಳಿ ಶಹರ ತಹಸೀಲ್ದಾರ ಮಹೇಶ ಭಗವಂತ ಗಸ್ತೆ, ಹುಬ್ಬಳ್ಳಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ. ರಾಮಚಂದ್ರ ಹೊಸಮನಿ ಹಾಗೂ ಬಾಳು ಮಗಜಿಕೊಂಡಿ, ಸರ್ವಮಂಗಳಾ ಪಾಠಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಶಾಲೆಗಳ ಅಧ್ಯಾಪಕರು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ಅಡುಗೆ ಅನಿಲ ಸೋರಿಕೆ ತಡೆಗಟ್ಟುವ ಕ್ರಮಗಳ ಬಗ್ಗೆ ಅಣುಕು ಪ್ರದರ್ಶನದ ಮೂಲಕ ಅಗ್ನಿಶಾಮಕ ದಳದ ಅಧಿಕಾರಿಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸಿದ್ದಾರೆ. ಅವಘಡಗಳನ್ನು ತಡೆಗಟ್ಟಲು ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ. ಸಾರ್ವಜನಿಕರು ಅಡುಗೆ ಅನಿಲ ಬಳಕೆ ಮಾಡುವಾಗ ಜಾಗೃತರಾಗಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು → ಪ್ರಭು ಹೇಳಿದರು.



