ಹಾವೇರಿ:- ಜಿಲ್ಲೆಯ ಹಾನಗಲ್ ಪಟ್ಟಣದ ಸರ್ಕಾರಿ ಮಾದರಿ ಶಾಲೆಯಲ್ಲಿ ಅತಿಥಿ ಶಿಕ್ಷಕ ಹಾಗೂ ಎಸ್ ಡಿಎಂಸಿ ಅಧ್ಯಕ್ಷ ಒಬ್ಬರಿಗೊಬ್ಬರು ಬಡಿದಾಡಿಕೊಂಡ ಘಟನೆ ನಡೆದಿದೆ.
https://www.facebook.com/share/r/1CKpFGBeJg/
ಅತಿಥಿ ಶಿಕ್ಷಕ ನವೀನ್ ಹಾಗೂ SDMC ಅಧ್ಯಕ್ಷ ಸತೀಶ್ ಬೊಸ್ಲೆ ನಡುವೆ ಶಾಲಾ ಮೈದಾನದಲ್ಲೇ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿದ್ದಾರೆ. ಅತಿಥಿ ಶಿಕ್ಷಕರ ಸಂಬಳ ಬಿಡುಗಡೆಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ SDMC ಅಧ್ಯಕ್ಷನ ವಿರುದ್ಧ ಕೇಳಿಬಂದಿದ್ದು, ಇದೇ ವಿಚಾರದಲ್ಲಿ ಇಬ್ಬರ ನಡುವೆ ಹಿಂದಿನಿಂದಲೂ ವೈಮನಸ್ಸು ಉಂಟಾಗಿತ್ತು ಎನ್ನಲಾಗಿದೆ.
ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಶಾಲಾ ಆವರಣದಲ್ಲಿ ಮತ್ತೆ ನಡೆದ ಮಾತಿನ ಚಕಮಕಿ ತೀವ್ರ ವಾಗ್ವಾದಕ್ಕೆ ತಿರುಗಿ ಅದು ಹೊಡೆದಾಟಕ್ಕೆ ಕಾರಣವಾಗಿದೆ. ಘಟನೆಯ ವೇಳೆ ಶಾಲಾ ಮೈದಾನದಲ್ಲಿದ್ದವರು ಮಧ್ಯ ಪ್ರವೇಶಿಸಿ ಇಬ್ಬರನ್ನೂ ಬೇರ್ಪಡಿಸಿದ್ದಾರೆ. ಹೊಡೆದಾಟದ ದೃಶ್ಯಗಳು ಮೊಬೈಲ್ನಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿವೆ. ಘಟನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಗಮನಹರಿಸಿದ್ದು, ಮುಂದಿನ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ.



