ವಿಜಯಸಾಕ್ಷಿ ಸುದ್ದಿ, ಗದಗ: 2025-26ನೇ ಸಾಲಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಗದಗ ಜಿಲ್ಲೆಯಾದ್ಯಂತ ಬಾಲ ಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಸಂದೇಶ ಸಾರುವ ಅಟೋ ಪ್ರಚಾರಕ್ಕೆ ಸೋಮವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಬಾಲಕಾರ್ಮಿಕ ಕಿಶೋರ ಕಾರ್ಮಿಕ ಪದ್ಧತಿ ವಿರೋಧಿ ಸಂದೇಶ ಸಾರುವ ಕರಪತ್ರ, ಪೋಸ್ಟರ್‌ಗಳು ಹಾಗೂ ಸ್ಟಿಕರ್‌ಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಗದಗ ಕಾರ್ಮಿಕ ನಿರೀಕ್ಷಕರಾದ ಸುಷ್ಮಾ, ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸಂದೇಶ ಪಾಟೀಲ ಸೇರಿದಂತೆ ಕಾರ್ಮಿಕ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.



