ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ಕಣವಿ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಿಯಾಂಕಾ ಹನಮಂತಪ್ಪ ಸುಳ್ಳದ ರಾಷ್ಟ್ರಮಟ್ಟದ ಖೋಖೋ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆಂದು ರಾಷ್ಟ್ರಮಟ್ಟದ ತೀರ್ಪುಗಾರ ಜಿತೇಂದ್ರ ಸುಣಗಾರ ತಿಳಿಸಿದ್ದಾರೆ.
ಗುಜರಾತಿನಲ್ಲಿ ಅಮೆಚೂರ್ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ 14 ವರ್ಷದೊಳಗಿನ ರಾಷ್ಟ್ರಮಟ್ಟದ ಖೋಖೋ ಚಾಂಪಿಯನ್‌ಶಿಪ್ ಪಂದ್ಯಾವಳಿಯಲ್ಲಿ ಪ್ರಿಯಾಂಕಾ ಹನಮಂತಪ್ಪ ಸುಳ್ಳದ ಭಾಗವಹಿಸಿ ತನ್ನ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ. ಕಣವಿ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಿಯಾಂಕಾ ಹನಮಂತಪ್ಪ ಸುಳ್ಳದ ರಾಷ್ಟ್ರಮಟ್ಟದ ಖೋಖೋ ಪಂದ್ಯಾವಳಿಗೆ ಆಯ್ಕೆಯಾಗಿದ್ದಕ್ಕಾಗಿ ಕಣವಿ ಹೊಸೂರು ಗ್ರಾಮಗಳ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಹಾಗೂ ಸಿಬ್ಬಂದಿ ವರ್ಗ, ಕಣವಿ ಹೊಸೂರು ಗ್ರಾಮಗಳ ಗುರು-ಹಿರಿಯರು, ಸಂಘ, ಸಂಸ್ಥೆಗಳು ಹಾಗೂ ಕ್ರೀಡಾಭಿಮಾನಿಗಳು ಅಭಿನಂದಿಸಿದ್ದಾರೆ.
ಕರ್ನಾಟಕ ರಾಜ್ಯ ಖೋಖೋ ಅಮೆಚೂರ್ ಸಂಸ್ಥೆ ಬೆಂಗಳೂರು, ರಾಜ್ಯ ಕಾರ್ಯದರ್ಶಿಗಳಾದ ಚಿನ್ನಮೂರ್ತಿ, ಸಹ ಕಾರ್ಯದರ್ಶಿ ಜಾಡರ, ಗದಗ ಜಿಲ್ಲಾ ಅಮೆಚೂರ್ ಖೋಖೋ ಸಂಸ್ಥೆಯ ಅಧ್ಯಕ್ಷರಾದ ಅಂದಪ್ಪ ಉಳ್ಳಾಗಡ್ಡಿ ಹಾಗೂ ಕಾರ್ಯದರ್ಶಿ ಮುತ್ತಪ್ಪ ಮಾಳಶೆಟ್ಟಿ, ತರಬೇತಿ ನೀಡಿದ ವೈ.ಬಿ. ಗೋವಣ್ಣವರ ಗುರುಗಳನ್ನು ಅಭಿನಂದಿಸಿದ್ದಾರೆ.



