ಬೆಂಗಳೂರು:- ಅತಿವೇಗವಾಗಿ ಚಲಿಸುತ್ತಿದ್ದ ಟಿಪ್ಪರ್ ಲಾರಿಯ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದ ಘಟನೆ ತಡರಾತ್ರಿ ಗೊರಗುಂಟೆಪಾಳ್ಯ ಜಂಕ್ಷನ್ನಲ್ಲಿ ನಡೆದಿದೆ.
ಕಬ್ಬಿಣದ ಕಂಬಿಗಳ ಲೋಡ್ ತುಂಬಿಕೊಂಡು ಜಾಲಹಳ್ಳಿ ಮಾರ್ಗದಿಂದ ಬರುತ್ತಿದ್ದ ಲಾರಿ, ಗೊರಗುಂಟೆಪಾಳ್ಯ ಬಳಿ ಬಂದಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಯಶವಂತಪುರ ಸಂಚಾರಿ ಪೊಲೀಸರು ಲಾರಿಯನ್ನು ತೆರವುಗೊಳಿಸಿ ಸಂಚಾರ ವ್ಯವಸ್ಥೆಯನ್ನು ಸರಿಪಡಿಸಿದ್ದಾರೆ.



