ಚಿಕ್ಕಬಳ್ಳಾಪುರ: ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿವಾದದ ಕೇಂದ್ರದಲ್ಲಿ ನಿಂತಿದ್ದಾರೆ. ನಗರಸಭೆ ಪೌರಾಯುಕ್ತೆ ವಿರುದ್ಧ ಅಶ್ಲೀಲ ಮತ್ತು ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದ ಪ್ರಕರಣದಲ್ಲಿ ಈಗಾಗಲೇ ಎಫ್ಐಆರ್ ದಾಖಲಾಗಿದೆ. ಕಳೆದ ಎರಡು ದಿನದಿಂದ ರಾಜೀವ್ ಗೌಡ ಫೋನ್ ಸ್ವಿಚ್‌ಆಫ್ ಮಾಡಿಕೊಂಡು ತಲೆಮರೆಸಿದ್ದಾರೆ.
ಅವರ ಬಂಧನಕ್ಕೆ ಪೊಲೀಸರು 3 ತಂಡ ರಚನೆ ಮಾಡಿದ್ದು, ಗುರುವಾರ ಮನೆಯಲ್ಲಿನ ಮತ್ತು ಸಂಬಂಧಿಕರು, ಸ್ನೇಹಿತರ ಮನೆಗಳಲ್ಲಿ ಶೋಧ ನಡೆಸಿದರು. ಈ ವೇಳೆ ಪತ್ನಿ ಪೊಲೀಸ್‌ಗಳ ಜೊತೆ ರಂಪಾಟ ಮಾಡಿಕೊಂಡು, ಸರ್ಚ್ ವಾರಂಟ್ ಇಲ್ಲದೇ ಮನೆಯಲ್ಲಿ ಬಾರದಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣ ಹೈಕಮಾಂಡ್ ಅಂಗಳಕ್ಕೂ ತಲುಪಿದ್ದು, ಕೆಪಿಸಿಸಿ ವರದಿ ನೀಡುವಂತೆ ಸೂಚಿಸಿದೆ. ಇಲ್ಲಿನ ಉನ್ನತ ಮೂಲಗಳ ಪ್ರಕಾರ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ನೇರ ಫೋನ್ ಕರೆ ಮೂಲಕ ವರದಿ ಕೇಳಲಾಗಿದೆ. ನೋಟಿಸ್ ನೀಡಲಾಗಿದ್ದು, ವಾರದೊಳಗೆ ಸೂಕ್ತ ಉತ್ತರ ನೀಡದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವ ಹಂತದಲ್ಲಿ ಇದೆ.
ಈ ಘಟನೆ ಶಿಡ್ಲಘಟ್ಟ, ಹೊಸಕೋಟೆ, ದೇವನಹಳ್ಳಿ ಮತ್ತು ಬೆಂಗಳೂರಿನ 9 ಕ್ರಿಮಿನಲ್ ಪ್ರಕರಣಗಳ ಹಿನ್ನೆಲೆಯೊಂದಿಗೆ ಭಾರೀ ಚರ್ಚೆಗೆ ಕಾರಣವಾಗಿದೆ. ರಿಯಲ್ ಎಸ್ಟೇಟ್ ವಂಚನೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಅವರ ಭಾಗಿದಾರಿ ದಾಖಲಾಗಿದೆ.
ಜಿಲ್ಲಾ ಸರ್ಕಾರಿ ನೌಕರರ ಸಂಘ ಮತ್ತು ಸಾರ್ವಜನಿಕರ ಸಂಘಟನೆಗಳು ಇಂದು ಜಿಲ್ಲಾಡಳಿತ ಭವನದ ಮುಂದೆ ರಾಜೀವ್ ಗೌಡನ ಬಂಧನಕ್ಕಾಗಿ ಪ್ರತಿಭಟನೆ ನಡೆಸಲಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಚಿವ ರಹೀಂ ಖಾನ್, ಮಹಿಳಾ ಅಧಿಕಾರಿಗೆ ಆಗಿರುವ ಅನ್ಯಾಯಕ್ಕೆ ಬೆಂಬಲ ನೀಡುವ ಆಕ್ರೋಶವೂ ವೀಕ್ಷಿಸಲಾಗುತ್ತಿದೆ.



