ಬೆಂಗಳೂರು: ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಾರ್ಮಿಕವಾಗಿ ಹೇಳಿದರು.
ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಸಚಿವರು. ಕುಮಾರಸ್ವಾಮಿ ಅವರಿಗೆ ಮಾತನಾಡುವ ಚಪಲ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಹೇಳಿರುವ ಮಾತಿಗೆ ಸಚಿವರು ತಿರುಗೇಟು ಕೊಟ್ಟರು.
ನಿಮ್ಮದೊಂದು ರೀತಿ ಚಪಲ, ನನ್ನದೊಂದು ರೀತಿ ಚಪಲ. ನಿಮ್ಮದು ಹಣ ಮಾಡುವ ಚಪಲ. ನನ್ನದು ನಮ್ಮದು ಜನರ ಸಮ ಸ್ಪಂದಿಸಿ ಅವರ ಬೆಂಬಲ ಪಡೆಯುವ ಚಪಲ. ಅವರಿಗೂ ನನಗೂ ಇರುವ ವ್ಯತ್ಯಾಸ ಇಷ್ಟೇ ಎಂದು ಟೀಕಾಕಾರರಿಗೆ ಟಾಂಗ್ ಕೊಟ್ಟರು ಕೇಂದ್ರ ಸಚಿವರು.
ಸ್ವಜಾತಿಯವರಿಂದಲೇ ಅನ್ಯಾಯ ಆಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರಲ್ಲ ಎನ್ನುವ ಪ್ರಶ್ನೆಗೆ ಉತ್ತರಿಸಿದ ಸಚಿವರು; ನಾನು ಆ ವರದಿಯನ್ನು ನೋಡಿದ್ದೇನೆ. ಕಷ್ಟ ಬಂದ ಕ್ಯಾಸ್ಟ್ ಅಂತಾರೆ. ಆದರೆ ಅವರು ಅವರು ಪ್ರತಿನಿಧಿಸುವ ಜಾತಿಗೆ ಏನು ಮಾಡಿದ್ದಾರ ಬೆಳಗ್ಗೆಯಿಂದ ಸಂಜೆವರೆಗೂ ಹಣ ಹೊಡೆಯಬೇಕು ಎನ್ನುವವರು ಅವರು. ಬೇಕು ಅಂತಾರೆ. ಜನರ ಬೆಂಬಲ ಯಾವ ರೀತಿ ಪಡೆಯಬೇಕು ಎನ್ನುವುದಕ್ಕಿಂತ ಕ್ಷಣ ಕ್ಷಣವೂ ರಾಜ್ಯದ ಲೂಟಿ ಮಾಡಬೇಕು ಎಂದು ಕೆಲಸ ಮಾಡ್ತಿದ್ದಾರೆ. ಅಂತಹ ವ್ಯಕ್ತಿಗಳಿಗೆ ಜಾತಿ ಹೆಸರಿನಲ್ಲಿ ಬೆಂಬಲ ಕೊಡ್ತಾರಾ? ಎಂದು ಅವರು ಟ್ವೀಟ್ ಟೀಕಿಸಿದರು.
ನಾನು ಬಾಯಿ ಚಪಲಕ್ಕೆ ಮಾತಾಡಲ್ಲ. ಇಂಥವರು ನಡೆಸುವ ಅಕ್ರಮಗಳ ಬಗ್ಗೆ ಜನರಿಗೆ ಮಾಹಿತಿ ಕೊಡ್ತಿದ್ದೇನೆ ಅಷ್ಟೇ. ನಾನು ಮಾತನಾಡುವುದು ನನ್ನ ಮತ್ತು ಜನತೆಯ ಸಂಬಂಧ ಬೆಳೆಸಿಕೊಳ್ಳಲು. ಈ ಅಣ್ಣ ತಮ್ಮಂದಿರದ್ದು ಕಟ್ಟಿಕೊಂಡು ನನಗೇನಾಗಬೇಕು? ದಿನ ಬೆಳಗಾದರೆ ಯಾರ ತಲೆ ಒಡೆಯಬೇಕು? ಯಾರ ಜಮೀನಿಗೆ ಫೆನ್ಸಿಂಗ್ ಹಾಕಬೇಕು? ಯಾವ ರೀತಿ ಅಕ್ರಮವಾಗಿ ಸಂಪಾದನೆ ಮಾಡಬೇಕು ಎನ್ನುವ ಜಾತಿ ಹೆಸರು ಹೇಳಿದಾಕ್ಷಣ ಬೆಂಬಲ ಕೊಡ್ತಾರ? ಎಂದು ಖಾರವಾಗಿ ಪ್ರಶ್ನಿಸಿದರು.



