ದೇವನಹಳ್ಳಿ: ಬೈಕ್–ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬೈಚಾಪುರ–ಬೆಟ್ಟಕೋಟೆ ಮಧ್ಯೆ ನಡೆದಿದೆ.
ದೇವನಹಳ್ಳಿಯಿಂದ ಬೂದಿಗೆರೆ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ವಿದ್ಯಾರ್ಥಿಗಳು, ನಿಯಂತ್ರಣ ತಪ್ಪಿ ಮೊದಲು ಡಿವೈಡರ್ಗೆ ಡಿಕ್ಕಿ ಹೊಡೆದು, ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿಗೆ ಢಿಕ್ಕಿ ಹೊಡೆದಿದ್ದಾರೆ.
ಅಪಘಾತದ ತೀವ್ರತೆಗೆ ದೇಹಗಳು ಛಿದ್ರ ಛಿದ್ರವಾಗಿ ಬಿದ್ದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಹುಣಸಮಾರೇನಹಳ್ಳಿ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಅಪಘಾತದಿಂದಾಗಿ ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.



