ವುಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ನಾಗಾಲೋಟ ಮುಂದುವರಿದಿದೆ.
ಈವರೆಗೆ ಆಡಿದ ನಾಲ್ಕು ಪಂದ್ಯಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಆರ್‌ಸಿಬಿ, +1.600 ನೆಟ್ ರನ್ ರೇಟ್‌ನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಉಳಿದ ನಾಲ್ಕು ಪಂದ್ಯಗಳಲ್ಲಿ ಕೇವಲ ಎರಡು ಗೆಲುವು ಸಾಧಿಸಿದರೆ ಪ್ಲೇಆಫ್ ಪ್ರವೇಶ ಖಚಿತವಾಗಲಿದ್ದು, ಮೂರು ಪಂದ್ಯಗಳಲ್ಲಿ ಜಯಗಳಿಸಿದರೆ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ.
ಇನ್ನೂ ದ್ವಿತೀಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು 5 ಪಂದ್ಯಗಳಿಂದ 4 ಪಾಯಿಂಟ್ಸ್ ಮಾತ್ರ ಕಲೆಹಾಕಿದೆ. ಇನ್ನುಳಿದ 3 ಪಂದ್ಯಗಳಲ್ಲೂ ಜಯ ಸಾಧಿಸಿದರೆ ಒಟ್ಟು 10 ಅಂಕಗಳನ್ನು ಮಾತ್ರ ಪಡೆಯಲಿದೆ. ಇತರ ತಂಡಗಳಿಗೂ ಆರ್‌ಸಿಬಿಯನ್ನು ಹಿಂದಿಕ್ಕುವುದು ಕಷ್ಟವಾಗಿದೆ. ಈ ಹಿನ್ನೆಲೆ ಆರ್‌ಸಿಬಿ ತಂಡವು 14 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡು ನೇರವಾಗಿ ಫೈನಲ್ ಪ್ರವೇಶಿಸುವ ಭರವಸೆಯಲ್ಲಿದೆ.



