ಕೊಪ್ಪಳ: ಕೊಪ್ಪಳ ಮೀಡಿಯಾ ಕ್ಲಬ್‌ನಲ್ಲಿ ನೂತನ ಅಧ್ಯಕ್ಷ ಹಾಗೂ ಗೌರವಾಧ್ಯಕ್ಷರ ಪದಗ್ರಹಣ ಸಮಾರಂಭ ಮತ್ತು ನೂತನ ಸದಸ್ಯರ ಸೇರ್ಪಡೆ ಸಭೆ ಶುಕ್ರವಾರ ನಡೆಯಿತು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ದೇವು ನಾಗನೂರು ಹಾಗೂ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಕರುಗಲ್ ಅವರನ್ನು ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇದೇ ವೇಳೆ ನಿರ್ಗಮಿತ ಅಧ್ಯಕ್ಷ ರವೀಂದ್ರ ವಿ.ಕೆ. ಹಾಗೂ ನಿರ್ಗಮಿತ ಗೌರವಾಧ್ಯಕ್ಷ ಪ್ರಕಾಶ ಕಂದಕೂರು ಅವರಿಗೂ ಸನ್ಮಾನ ಮಾಡಲಾಗಿದೆ.
ಸಮಾರಂಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ದೇವು ನಾಗನೂರು ಹಾಗೂ ಗೌರವಾಧ್ಯಕ್ಷ ಬಸವರಾಜ ಕರುಗಲ್, ಕ್ಲಬ್‌ನಲ್ಲಿ ಇದುವರೆಗೆ ಕೈಗೊಂಡಿರುವ ಚಟುವಟಿಕೆಗಳನ್ನು ಮುಂದುವರೆಸುವುದರ ಜೊತೆಗೆ ಸದಸ್ಯರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸಕ್ರಿಯವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಈ ವೇಳೆ ಕ್ಲಬ್‌ನ ನೂತನ ಸದಸ್ಯರಾಗಿ ಸೇರ್ಪಡೆಯಾದ ಕುಬೇರ ಮಜ್ಜಗಿ ಮತ್ತು ರಮೇಶ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಸಭೆಯಲ್ಲಿ ಕ್ಲಬ್ ಸದಸ್ಯರು ತಮ್ಮ ಅಭಿಪ್ರಾಯಗಳು ಹಾಗೂ ಸಲಹೆಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಮುಕ್ಕಣ್ಣ ಕತ್ತಿ, ಕಾರ್ಯದರ್ಶಿ ದತ್ತು ಕಮ್ಮಾರ, ಖಜಾಂಚಿ ಅನಿಲ್ ಬಾಚನಹಳ್ಳಿ ಸೇರಿದಂತೆ ಕ್ಲಬ್ ಸದಸ್ಯರಾದ ಸೋಮರಡ್ಡಿ ಅಳವಂಡಿ, ಬಸವರಾಜ ಶೀಲವಂತರ, ಸುಬ್ಬಾರಾವ್ ಪಟವಾರಿ, ನಾಭಿರಾಜ ದಸ್ತೇನವರ, ಮಾರುತಿ ಕಟ್ಟಿಮನಿ, ಶ್ರೀಕಾಂತ ಅಕ್ಕಿ, ಹುಸೇನ ಪಾಷಾ, ದೊಡ್ಡೇಶ ಯಲಿಗಾರ, ವಿಠ್ಠಲ ದುತ್ತರಗಿ, ಸಂತೋಷ ದೇಶಪಾಂಡೆ, ಪ್ರಮೋದ ಕುಲಕರ್ಣಿ, ಬಸವರಾಜ ಕರ್ಕಿಹಳ್ಳಿ, ರವೀಂದ್ರ ವಿ.ಕೆ., ವಿನಾಯಕ, ಸಮೀರ ಪಾಟೀಲ್, ಶರಣಬಸವ ಹುಲಿಹೈದರ್, ಮಂಜುನಾಥ ಗಂಗಾವತಿ ಹಾಗೂ ಈರಯ್ಯ ಹಿರೇಮಠ ಉಪಸ್ಥಿತರಿದ್ದರು.



