ಬೆಳಗಾವಿ:- ಚುನಾವಣಾ ಆಯೋಗದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ನಿಜವಾದ ಮತದಾರರಿಗೆ ಯಾವುದೇ ರೀತಿಯ ಅನ್ಯಾಯವಾಗಬಾರದು ಎಂಬುದೇ ಸರ್ಕಾರದ ಮುಖ್ಯ ಕಾಳಜಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಈ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ಆದರೆ ಮತದಾರರ ಹೆಸರುಗಳು ಪಟ್ಟಿಯಿಂದ ತಪ್ಪಿಹೋಗದಂತೆ ಎಚ್ಚರಿಕೆಯಿಂದ ಪ್ರಕ್ರಿಯೆ ನಡೆಯಬೇಕು ಎಂದು ಬಿಎಲ್‌ಒಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಇದೇ ವೇಳೆ ಡಿಜಿಪಿ ರಾಮಚಂದ್ರರಾವ್ ಅವರ ಮಹಿಳೆಯರೊಂದಿಗಿನ ಅನುಚಿತ ವರ್ತನೆ ಆರೋಪದ ಕುರಿತು ಮಾತನಾಡಿ, ವಿಚಾರಣೆ ನಡೆಸಿ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಇನ್ನೂ ವಿರೋಧಪಕ್ಷಗಳು ಸುಳ್ಳು ಆರೋಪಗಳಿಂದ ಜನರನ್ನು ದಾರಿ ತಪ್ಪಿಸುತ್ತಿವೆ ಎಂದು ಟೀಕಿಸಿದ ಅವರು, ಮಹಾರಾಷ್ಟ್ರ–ಕರ್ನಾಟಕ ಗಡಿವಿವಾದದ ವಿಚಾರದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸಲು ರಾಜ್ಯದ ಕಾನೂನು ತಂಡ ಸಿದ್ಧವಾಗಿದೆ ಎಂದರು.



